ವಿಜಯಪುರ: ಕರ್ನಾಟಕ- ಮಹಾರಾಷ್ಟ್ರದ ಗಡಿ ಜಿಲ್ಲೆ ವಿಜಯಪುರದಲ್ಲಿ ಮತ್ತೆ ಭೂಕಂಪನ ಸಂಭವಿಸಿದೆ.
ಶನಿವಾರ ಸಂಜೆ 8.16 ರ ಸುಮಾರಿಗೆ ಭೂಮಿ ಕಂಪಿಸಿದ್ದು ಆಲಮಟ್ಟಿಯ ರಿಕ್ಟರ್ ಮಾಪಕದಲ್ಲಿ 3.5 ರಷ್ಟು ತೀವ್ರತೆ ದಾಖಲಾಗಿದೆ.
ವಿಜಯಪುರ ನಗರದ ಬಹುತೇಕ ಬಡಾವಣೆಗಳಲ್ಲಿ ಭೂಕಂಪನದ ಅನುಭವವಾಗಿದೆ. ಭೂಕಂಪನದ ಕೇಂದ್ರ ಬಿಂದು ಮಹಾರಾಷ್ಟ್ರದ ಲ್ಲಿ ಕಂಡು ಬಂದಿದ್ದು, ಅಂದಾಜು 5 ಕಿಮೀ ಆಳದಲ್ಲಿ ತರಂಗಗಳು ಸೃಷ್ಟಿಯಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಜಿಲ್ಲಾ ಡಳಿತ ಮಾಹಿತಿ ಕಲೆ ಹಾಕುತ್ತಿರುವುದಾಗಿ ತಿಳಿಸಿದೆ.