ಜಿಲ್ಲೆ

ಭ್ರಷ್ಟ್ಟಾಚಾರಮುಕ್ತ ಸಮಾಜಕ್ಕಾಗಿ ಕೈ ಜೋಡಿಸಿ

ಚಿತ್ರದುರ್ಗ: ದೇಶದ ದೊಡ್ಡ ಆಸ್ತಿಯಾಗಿರುವ ಯುವಜನರು ಭ್ರಷ್ಟಾಚಾರ ವಿರುದ್ಧ ಧ್ವನಿ ಎತ್ತಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರೋಣ್‌ವಾಸುದೇವ ಅವರು ಹೇಳಿದರು.

ನಗರದ ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ‌್ಯಕ್ರಮ ಉದ್ಘಾಟಿಸಿ ಮಾತನಾಡಿ, ಲಂಚಮುಕ್ತ ್ತ ಸಮಾಜ ನಿರ್ಮಾಣಕ್ಕಾಗಿ ಯುವಜನರು ಕೈ ಜೋಡಿಸಬೇಕಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಲೋಕಾಯುಕ್ತ ಎಸ್‌ಪಿ ಎನ್.ವಾಸುದೇವರಾಮ ಮಾತನಾಡಿ, ಲೋಕಾಯುಕ್ತ ಸಂಸ್ಥೆ ಸದಾ ಸಾರ್ವಜನಿಕರೊಂದಿಗೆ ಇರುತ್ತದೆ. ಹಿಂಜರಿಯದೆ ಭ್ರಷ್ಟಾಚಾರದ ವಿರುದ್ಧ ದೂರು ದಾಖಲಿಸಬೇಕು. ಭ್ರಷ್ಟಾಚಾರ ನಿರ್ಮೂಲನೆಗಾಗಿ ಸಂಸ್ಥೆ ನಡೆಸುತ್ತಿರುವ ಹೋರಾಟಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕೆಂದರು.

ಲೋಕಾಯುಕ್ತದ ವಿಶೇಷ ಸಾರ್ವಜನಿಕ ಅಭಿಯೋಜಕ ಬಿ.ಮಲ್ಲೇಶಪ್ಪ, ಲೋಕಾಯುಕ್ತ ಡಿವೈಎಸ್‌ಪಿ ಎನ್.ಮೃತ್ಯುಂಜಯ, ಪ್ರಾಚಾರ್ಯ ಡಾ.ಪಿ.ಬಿ.ಭರತ್ ಮಾತನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ‌್ಯದರ್ಶಿ ಎಂ.ವಿಜಯ್, ಲೋಕಾಯುಕ್ತ ಇನ್ಸ್‌ಪೆಕ್ಟರ್ ಬಿ.ಮಂಜುನಾಥ್ ಇದ್ದರು. ಜೆ.ಆಕಾಂಕ್ಷಾ ಪ್ರಾರ್ಥಿಸಿದರು. ಡಾ.ಎಚ್.ಜೆ.ಲೋಕೇಶ್ ನಿರೂಪಿಸಿದರು. ಸಂಗಮನಾಥ್ ಎಚ್.ಹೊಸಮನಿ ವಂದಿಸಿದರು.

ಆರೋಗ್ಯ ತಪಾಸಣೆ

ನಗರದ ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸೋಮವಾರ ಹೆಲ್ತ್ ಫ್ರೀ ಡಾಟ್‌ಇನ್ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ತಂಬಾಕುಮುಕ್ತ ಯುವ ಅಭಿಯಾನ ಏರ್ಪಡಿಸಲಾಗಿತ್ತು. ಪ್ರಾಚಾರ‌್ಯ ಡಾ.ಪಿ.ಬಿ.ಭರತ್, ಡಾ.ಇ.ನಿರಂಜನ್, ಡಾ.ಎಸ್.ಕೆ.ವೀರೇಶ್, ಆರೋಗ್ಯ ಸಿಬ್ಬಂದಿ ಲಿಖಿತ್, ಹರ್ಷ ಮತ್ತು ಸರ್ದಾರ್ ಇದ್ದರು. 50ಕ್ಕೂ ಹೆಚ್ಚು ಜನರು ಶಿಬಿರದ ಪ್ರಯೋಜನ ಪಡೆದರು.