ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಖಾಸಗಿ ವಸತಿ ಗೃಹವೊಂದರಲ್ಲಿ ಸೋಮವಾರ ಇಸ್ಪೀಟ್ ಆಟದಲ್ಲಿ ತೊಡಗಿದ್ದ ವೇಳೆ ಪೋಲಿಸರು ದಾಳಿ ನಡೆಸಿ 18 ಜನರನ್ನು ಬಂಧಿಸಿದ್ದು, 3.09 ಲಕ್ಷ ರೂ.ವಶಪಡಿಸಿಕೊಂಡಿದ್ದಾರೆ.
ಬಂಧಿತರೆಲ್ಲರೂ ಚಾಮರಾಜನಗರ ಜಿಲ್ಲೆ ಸಂತೇಮರಳ್ಳಿ ಹೋಬಳಿಯ ಬಾಣಹಳ್ಳಿ ಗ್ರಾಮದವರಾಗಿದ್ದಾರೆ. ಇವರೆಲ್ಲರೂ ಬೆಳಗ್ಗೆ ಮ.ಬೆಟ್ಟಕ್ಕೆ ಆಗಮಿಸಿದ್ದು, ಖಾಸಗಿ ವಸತಿ ಗೃಹದಲ್ಲಿ ಬಾಡಿಗೆ ಪಡೆದು ಇಸ್ಪೀಟ್ ಆಟದಲ್ಲಿ ತೊಡಗಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಧರ್ಮೇಂದ್ರ, ಇನ್ಸ್‌ಪೆಕ್ಟರ್ ಜಗದೀಶ್ ಅವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್‌ಪೆಕ್ಟರ್ ಬಸವರಾಜು ಹಾಗೂ ಸಿಬ್ಬಂದಿ ದಾಳಿ ನಡೆಸಿ 3.09 ಲಕ್ಷ ರೂ.ನಗದನ್ನು ವಶಕ್ಕೆ ಪಡೆದು ಆರೋಪಿಗಳನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.
ಈ ಸಂಬಂಧ ಮ.ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.