ಜಿಲ್ಲೆ

ಮಂಗಳೂರು ದಸರಾಕ್ಕೆ ಪಾಲಿಕೆಯಿಂದ ದೀಪಾಲಂಕಾರ

ಮಂಗಳೂರು : ಮಂಗಳೂರು ದಸರಾ ಮಹೋತ್ಸವಕ್ಕೆ ಈ ಬಾರಿ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನಗರದಲ್ಲಿ ದೀಪಾಲಂಕಾರ ವ್ಯವಸ್ಥೆ ಮಾಡಲಾಗುವುದು ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಮಂಗಳೂರು ದಸರಾದ ಖ್ಯಾತಿ ದೇಶದೆಲ್ಲೆಡೆ ಹಬ್ಬುತ್ತಿದೆ. ಕರಾವಳಿ ಭಾಗದಲ್ಲಿ ಮಂಗಳೂರು ದಸರಾ ಹೊಸ ಹುರುಪು ನೀಡುತ್ತಿದೆ. ಇದಕ್ಕೆ ಪೂರಕವಾಗಿ ಪಾಲಿಕೆಯ ವತಿಯಿಂದ ನಗರದಲ್ಲಿ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.