ಮಂಗಳೂರು: ನವರಾತ್ರಿ ಉತ್ಸವದ ಅಂಗವಾಗಿ ನಡೆಯಲಿರುವ ಮಂಗಳೂರು ದಸರಾಕ್ಕೆ ನಗರದ ಕುದ್ರೋಳಿ ಕ್ಷೇತ್ರ, ಮಂಗಳಾದೇವಿ ಕ್ಷೇತ್ರ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಗುರುವಾರ ಚಾಲನೆ ದೊರಕಿತು.
ಇಂದಿನಿಂದ ಅ.17ರವರೆಗೆ ನಡೆಯಲಿರುವ ನವರಾತ್ರಿ ಉತ್ಸವದ ಅಂಗವಾಗಿ ಕುದ್ರೋಳಿ ಕ್ಷೇತ್ರದಲ್ಲಿ ನವ ದುರ್ಗೆಯರು, ಗಣಪತಿ ಹಾಗೂ ಶಾರದಾ ಮಾತೆಯ ವಿಗ್ರಹಗಳ ಪ್ರತಿಷ್ಠೆ ನಡೆಯಿತು..
ಕ್ಷೇತ್ರದ ಅಂಗಣದಲ್ಕಿ ದೇವರ ಮೂರ್ತಿಗಳ ಪ್ರದಕ್ಷಿಣೆ ನಡೆಸಿ ಬಳಿಕ ದಸರಾ ದರ್ಬಾರು ಮಂಟಪದಲ್ಲಿ ಮೂರ್ತಿಗಳ ಪ್ರತಿಷ್ಠೆ ಧಾರ್ಮಿಕ ವಿಧಿ ವಿಧಾನಗಳ ಮೂಲಕ ನಡೆಸಲಾಯಿತು.
ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಕ್ಷೇತ್ರಾಡಳಿತ ಸಮಿಯ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಮುಡಾ ಅಧ್ಯಕ್ಷ ರವಿಶಂಕರ ಮಿಜಾರು,ಕಿಯೊನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಕ್ಷೇತ್ರಾಡಳಿತ ಮಂಡಳಿಯ ಕೋಶಾಧಿಕಾರಿ ಪದ್ಮ ರಾಜ್ ಮೊದಲಾದವರು ಉಪಸ್ಥಿತರಿದ್ದರು.