ಜಿಲ್ಲೆ

ಮಂಜುನಾಥ್ ವಿರುದ್ಧ ದೂರು ದಾಖಲು

ಚಿತ್ರದುರ್ಗ: ಪ್ರಧಾನಿ ನರೇಂದ್ರಮೋದಿ ಅವರ ಹೆಸರು ಪ್ರಸ್ತಾಪಿಸದೆ, ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಕಾಂಗ್ರೆಸ್ ಮುಖಂಡ ಜಿ.ಎಸ್.ಮಂಜುನಾಥ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದು ಪರಿಷದ್ ಮುಖಂಡ ಪಿ.ರುದ್ರೇಶ್ ನಗರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ದೂರು ದಾಖಲಿಸಿದ್ದಾರೆ.

ಹಿರಿಯೂರಿನ ಕಾರ್ಯಕ್ರಮವೊಂದರ ಬಹಿರಂಗ ಸಭೆಯಲ್ಲಿ ಪ್ರಧಾನಿ ಅವರನ್ನು ಅಪಮಾನಿಸುವ ಹೇಳಿಕೆ ನೀಡಿದ್ದು, ಸಮಾಜದಲ್ಲಿ ಶಾಂತಿ ಕದಡಲು ಪ್ರಯತ್ನಿಸಿದ್ದಾರೆ. ಇದರಿಂದ ದೇಶದ ಪ್ರಜೆಗಳ, ಮೋದಿ ಅಭಿಮಾನಿಗಳ, ಬಿಜೆಪಿ ಕಾರ್ಯಕರ್ತರ ಮನಸ್ಸಿಗೂ ನೋವುಂಟಾಗಿದೆ. ಸಂವಿಧಾನಿಕ ಹುದ್ದೆಗೆ ಅಗೌರವ ತೋರಿರುವ ಮಂಜುನಾಥ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲೇಬೇಕೆಂದು ಮನವಿ ಮಾಡಿದ್ದಾರೆ.