ಕೆ.ಆರ್.ಪೇಟೆ: ಮಕ್ಕಳಲ್ಲಿ ಅಡಗಿರುವ ವಿಶಿಷ್ಟ ಹಾಗೂ ವಿಭಿನ್ನ ಪ್ರತಿಭೆಗಳನ್ನು ಶಾಲಾ ಹಂತದಲ್ಲಿ ಗುರುತಿಸಿ ಅವುಗಳನ್ನು ಬೆಳಕಿಗೆ ತರುವ ಕೆಲಸಗಳನ್ನು ಪ್ರತಿಭಾ ಕಾರಂಜಿಯಂಥಹ ವೇದಿಕೆಗಳು ಮಾಡುತ್ತಿವೆ ಎಂದು ಬಿಇಒ ಆರ್.ಎಸ್.ಸೀತಾರಾಮು ತಿಳಿಸಿದರು.
ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಏರ್ಪಡಿಸಿದ್ದ ತಾಲೂಕು ಮಟ್ಟದ ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪುರಸಭಾ ಅಧ್ಯಕ್ಷೆ ಮಹಾದೇವಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ಎಸ್.ಧರ್ಮಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ಲಿಂಗರಾಜು, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಂ.ಬಸವರಾಜು ಮಾತನಾಡಿದರು.
ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸಿ.ಎನ್.ಯತೀಶ್, ತಾಲೂಕು ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಪಿ.ಜೆ.ಕುಮಾರ್, ತಾಲೂಕು ಕಸಾಪ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ ಇತರರು ಇದ್ದರು.