ಜಿಪಂ ಸಿಇಒ ಎಚ್.ಎಸ್.ಕೀರ್ತನಾ 
ಜಿಲ್ಲೆ

ಮಕ್ಕಳ ಬಾಲ್ಯ ಸುರಕ್ಷತೆಗಾಗಿ ಭದ್ರ ಬಾಲ್ಯ ಯೋಜನೆ ಅನುಷ್ಠಾನ

ನಿತ್ಯಾನಂದ ಎಸ್.ಎನ್.

ಚಿಕ್ಕಮಗಳೂರು: ಮಕ್ಕಳ ಬಾಲ್ಯವನ್ನು ಸುರಕ್ಷಿತಗೊಳಿಸುವ ಗುರಿ ಇರಿಸಿಕೊಂಡು ಜಿಲ್ಲೆಯಲ್ಲಿ ಭದ್ರ ಬಾಲ್ಯ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಎಲ್ಲ ಇಲಾಖೆಗಳು ಒಳಗೊಂಡು ಕಾರ್ಯ ನಿರ್ವಹಿಸುವ ಉz್ದೆÃಶ ಇರಿಸಿಕೊಳ್ಳಲಾಗಿದೆ ಎಂದು ಜಿಪಂ ಸಿಇಒ ಎಚ್.ಎಸ್.ಕೀರ್ತನಾ ತಿಳಿಸಿದರು.

ನಗರದ ಜಿಪಂ ಮಿನಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಇಲಾಖೆಗಳನ್ನು ಒಳಗೊಂಡು ಮಕ್ಕಳ ಕೇಂದ್ರಿತ ಯೋಜನೆಗಳನ್ನು ರೂಪಿಸಲಾಗಿದೆ. ಮಕ್ಕಳೇ ಮುಂದಿನ ಭವಿಷ್ಯವಾಗಿರುವುದರಿಂದ ಶಾಲಾ ಹಂತದಲ್ಲಿ ಎರಡು ವಿಭಾಗಗಳಾಗಿ ವಿಂಗಡಿಸಲಾಗಿದೆ. ಶಾಲಾ ಹಂತದಲ್ಲಿ ಮಕ್ಕಳೇ ನೇರವಾಗಿ ಪಾಲ್ಗೊಳ್ಳುವುದು ಇಲ್ಲವೆ ಅವರಿಗೆ ಮೂಲ ಸೌಕರ್ಯಗಳನ್ನು ಒದಗಿಸುವುದು. ನಾವು ಶಾಲೆಯನ್ನು ಪ್ರವೇಶಿಸುತ್ತಿದ್ದಂತೆ ವಿದ್ಯಾರ್ಥಿಗಳ ಸಂಖ್ಯೆಯನ್ನು ಆಧರಿಸಿ ವ್ಯವಸ್ಥೆ ಯಾವ ರೀತಿ ಇರಬೇಕೆನ್ನುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ. ಇದಕ್ಕೆ ಶಾಲಾಭಿವೃದ್ಧಿ ಸಮಿತಿಯಲ್ಲಿರುವ ನಿಧಿಯಿಂದ ಆ ಶಾಲೆಯ ಅವಶ್ಯಕತೆಗಳನ್ನು ಪೂರೈಸಲಾಗುತ್ತದೆ ಎಂದರು.

ಹೆಣ್ಣು ಮಕ್ಕಳು ಶಾಲೆಯಿಂದ ಹೊರಗುಳಿದರೆ ಅಂತಹ ಮಕ್ಕಳು ಬಾಲ್ಯ ವಿವಾಹಕ್ಕೆ ಒಳಪಡÀಬಹುದು ಅಥವಾ ಬಾಲ ಗರ್ಭಿಣಿಯರಾಗುವ ಸಂಭವ ಹೆಚ್ಚು. ಮಕ್ಕಳ ಬಗ್ಗೆ ಪಾಲಕರ ಗಮನ ಕಡಿಮೆಯಾದರೆ ಮಕ್ಕಳು ಬಾಲ್ಯದಲ್ಲೇ ಗರ್ಭಿಣಿಯರಾಗುವಂತಹ ಪ್ರಕರಣಗಳು ಹೆಚ್ಚುವ ಸಂಭವವಿದೆ. ಮಕ್ಕಳು ಉನ್ನತ ವಿದ್ಯಾಭ್ಯಾಸ ಮಾಡಿದರೆ ಅದರಿಂದಾಗುವ ಪ್ರಯೋಜನದ ಬಗ್ಗೆ ಪಾಲಕರಲ್ಲಿ ಸ್ಪಷ್ಟತೆ ಇಲ್ಲದ ಕಾರಣ ಈ ಸಮಸ್ಯೆ ಕಾಡುತ್ತಿದೆ ಎಂದು ತಿಳಿಸಿದರು.

೨೦೨೨ರಲ್ಲಿ ಸ್ವಲ್ಪ ಕಡಿಮೆಯೇ ಇದ್ದ ಬಾಲ ಗರ್ಭಿಣಿ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿವೆ. ಹಿಂದಿನ ವರ್ಷ ೧೪೪ ಪ್ರಕರಣಗಳು ಹಾಗೂ ಈ ವರ್ಷ ೧೫೬ ಪ್ರಕರಣಗಳು ಕಂಡು ಬಂದಿವೆ. ಮಕ್ಕಳೇ ಒಬ್ಬರನ್ನೊಬ್ಬರು ಇಷ್ಟಪಡುತ್ತಿರುವುದರಿಂದ ಈ ಪ್ರಕರಣಗಳು ಘಟಿಸುತ್ತಿವೆ ಎಂಬ ಸಾಮಾನ್ಯ ಅಭಿಪ್ರಾಯಗಳಿವೆ. ಅಸುರಕ್ಷಿತ ಲೈಂಗಿಕ ಸಂಬAಧದಿAದಾಗಿ ಬಾಲ್ಯದಲ್ಲೇ ಗರ್ಭಿಣಿಯಾಗುವ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಮಕ್ಕಳ ಭಾವನೆಯಲ್ಲೇ ಬದಲಾವಣೆ ತರಲು ಪ್ರಯತ್ನಿಸಬೇಕಾಗುತ್ತದೆ. ಹೀಗಾಗಿ ಭದ್ರ ಬಾಲ್ಯ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವೈದ್ಯರಿಂದ ಮಕ್ಕಳಿಗೆ ತಿಳಿಹೇಳುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಜಂಟಿ ಕೃಷಿ ನಿರ್ದೇಶಕಿ ಎಚ್.ಎಸ್.ಸುಜಾತ ಮಾತನಾಡಿ, ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಮಾರ್ಗಸೂಚಿ ಪ್ರಕಾರ ಆತ್ಮಹತ್ಯೆ ಮಾಡಿಕೊಂಡ ಸಾಲಗಾರ ರೈತನ ಹೆಸರಿನಲ್ಲೇ ಜಮೀನು ಇರಬೇಕೆಂದೇನಿಲ್ಲ. ಅವರ ತಂದೆ, ತಾಯಿ, ಪತ್ನಿಯ ಹೆಸರಿನಲ್ಲಿ ಜಮೀನು ಇದ್ದರೂ ಪ್ರಕರಣವನ್ನು ಪರಿಗಣಿಸಬೇಕೆಂದಿದೆ. ಸಾಲದ ವಿಚಾರದಲ್ಲೂ ಮಿತಿಯನ್ನು ಪರಿಗಣಿಸುವಂತಿಲ್ಲ. ಒಣಭೂಮಿ ಹೆಚ್ಚಿರುವ ಕಡೂರು ತಾಲೂಕಿನಲ್ಲಿ ಹೆಚ್ಚು ಆತ್ಮಹತ್ಯೆ ಪ್ರಕರಣಗಳು ಸಂಭವಿಸುತ್ತಿವೆ. ಅದನ್ನು ತಡೆಯುವ ನಿಟ್ಟಿನಲ್ಲಿ ಇರುವಂತಹ ಯೋಜನೆಗಳನ್ನೇ ಬಳಸಿಕೊಂಡು ಅಂತಹ ಧೃತಿಗೆಟ್ಟ ರೈತರಿಗೆ ನಿಮ್ಮ ಜೊತೆ ಸರ್ಕಾರ ಹಾಗೂ ಅಧಿಕಾರಿಗಳು ಇದ್ದಾರೆ ಎಂದು ಆತ್ಮಸ್ಥೆÊರ್ಯ ತುಂಬುವ ಕೆಲಸವನ್ನು ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸಲಹೆ ನೀಡಿದ್ದಾರೆ ಎಂದು ತಿಳಿಸಿದರು.

ನಮ್ಮಲ್ಲಿರುವ ಯೋಜನೆಗಳ ಬಗ್ಗೆ ಹೆಚ್ಚು ಪ್ರಚಾರ ನೀಡುವುದರ ಜೊತೆಗೆ ಕನಿಷ್ಠ ಬೆಂಬಲ ಬೆಲೆಯನ್ನು ಸಕಾಲದಲ್ಲಿ ನೀಡುವುದು, ಸಾಲ ಸೌಲಭ್ಯ ಮತ್ತು ಬ್ಯಾಂಕುಗಳಲ್ಲಿನ ಯೋಜನೆಗಳ ಬಗ್ಗೆ ಅರಿವು ಮೂಡಿಸುವುದು, ಕಿಸಾನ್ ಕ್ರೆಡಿಟ್ ಕಾರ್ಡ್ಗಳನ್ನು ಹೆಚ್ಚು ಮಾಡುವುದು ಅದರ ಜೊತೆಗೆ ಯೋಜನೆಗಳ ಬಗ್ಗೆ ರೈತರಿಗೆ ತರಬೇತಿ ನೀಡಿ ಜಾಗೃತಿ ಮೂಡಿಸಲು ಶಿಬಿರ ಆಯೋಜಿಸುವುದಾಗಿ ತಿಳಿಸಿದರು.

ರೈತರು ಏಕ ಬೆಳೆ ಬೆಳೆಯುವುದನ್ನು ನಿಲ್ಲಿಸಿ ಸಮಗ್ರ ಕೃಷಿ ಪದ್ಧತಿಯನ್ನು ಆಳವಡಿಸಿಕೊಳ್ಳಬೇಕು. ರೈತರಿಗೆ ಹವಾಮಾನಕ್ಕೆ ತಕ್ಕಂತೆ ಬೆಳೆಗಳನ್ನು ಬೆಳೆಯಲು ಅವರಿಗೆ ಅರಿವು ಮೂಡಿಸಬೇಕು. ಕಡೂರು ಮತ್ತು ಅಜ್ಜಂಪುರ ತಾಲೂಕಿನ ರೈತರಿಗೆ ಅಂತರ್ಜಲದ ಮಹತ್ವ ಹಾಗೂ ಅದನ್ನು ಯಾವ ರೀತಿ ಮರುಪೂರಣ ಮಾಡಬೇಕು ಎಂಬುದನ್ನು ತಿಳಿಸಬೇಕು. ಉಪಕಸುಬು ಹಾಗೂ ಸಮಗ್ರ ಕೃಷಿ ಪದ್ದತಿ ಮಾಡುವುದರಿಂದ ಕೃಷಿಯ ಸುಸ್ಥಿರತೆ ಕಂಡುಕೊಳ್ಳಬಹುದು. ರೈತರಿಗೆ ಸಂಸ್ಕರಣೆ ಹಾಗೂ ಮೌಲ್ಯವರ್ಧನೆ ಬಗ್ಗೆ ಒತ್ತು ಕೊಡಲು ಇಲಾಖೆಯಿಂದ ಅರಿವು ಮೂಡಿಸಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟರಾಜು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ್ ಉಪಸ್ಥಿತರಿದ್ದರು.