ಜಿಲ್ಲೆ

'ಮಕ್ಕಳ ಮೇಲಿನ ದೌರ್ಜನ್ಯಗಳನ್ನುತಡೆಗಟ್ಟಲು ಜಾಗೃತಿ ಮತ್ತು ಅರಿವು' ತರಬೇತಿ ಕಾರ್ಯಕ್ರಮಕ್ಕೆ ಕಲಬುರಗಿಯಲ್ಲಿ ನಾಳೆ ಚಾಲನೆ


ಕಲಬುರಗಿ, :ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆ ಹಾಗೂ ಕಲಬುರಗಿ ಜಿಲ್ಲೆಯ ವಿವಿಧ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಇದೇ ಆಗಸ್ಟ್ ೨೨ ರಂದು ಬೆಳಿಗ್ಗೆ ೧೦ ಗಂಟೆಗೆ ಕಲಬುರಗಿ ನಗರದ ಪಿ.ಡಿ.ಎ. ಇಂಜನಿಯರಿAಗ್ ಮಹಾವಿದ್ಯಾಲಯದ ಸಭಾಂಗಣದಲ್ಲಿ ಮಿಷನ್ ಸುರಕ್ಷಾ ತರಬೇತಿದಾರರಿಗೆ “ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಜಾಗೃತಿ ಮತ್ತು ಅರಿವು” ಕುರಿತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

 ಕಲಬುರಗಿ ಪೋಕ್ಸೋ ವಿಶೇಷ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಯಮನಪ್ಪ ಬಮ್ಮಣಗಿ ಹಾಗೂ ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯರ್ದಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮೊಹ್ಮದ ಅನ್ವರ ಹುಸೇನ ಮೊಗಲಾನಿ ಅವರು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಲಬುರಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷರಾದ ಫೌಜಿಯಾ ತರನ್ನುಮ್ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.