ಚಿತ್ರದುರ್ಗ: ಮಕ್ಕಳ ರಕ್ಷಣೆ, ಬೆಳವಣಿಗೆ ವಿಷಯದಲ್ಲಿ ಉತ್ತಮ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಹೆಚ್ಚಿನ ಜವಾಬ್ದಾರಿಯಿಂದ ಕಾರ‌್ಯ ನಿರ್ವಹಿಸ ಬೇಕೆಂದು ರಾಜ್ಯಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂದಲ್ಲಿ ಶನಿವಾರ ತಾಲೂಕು ಹಂತದ ಮಕ್ಕಳ ಹಕ್ಕುಗಳು ಹಾಗೂ ರಕ್ಷಣಾ ವ್ಯವಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತ ನಾ ಡಿದ ಅವರು, ಮಕ್ಕಳ ರಕ್ಷಣೆ ವಿಷಯದಲ್ಲಿ ತಹಸೀಲ್ದಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಹೊಣೆಗಾರಿಕೆ ಅಧಿಕವಿರುತ್ತದೆ. ತಾ ಲೂಕು ಮಟ್ಟದಲ್ಲಿರುವ ಬಾಲ್ಯವಿವಾಹ ನಿಷೇಧ ಸಮಿತಿ, ಮಕ್ಕಳ ರಕ್ಷಣಾ ಮತ್ತಿತರ ಸಮಿತಿಗಳು ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಮಕ್ಕಳ ಕೇಂದ್ರಿತ ಕಾಯ್ದೆ-ಕಾನೂನು, ಕಾರ್ಯಕ್ರಮಗಳ ಮೇಲ್ಚಿಚಾರಣೆ ಹೊಣೆ ನಮ್ಮ ಆಯೋಗದ ಮೇಲಿದೆ. ಸಭೆಗೆ ತಹಶೀಲ್ದಾರ್‌ಗಳು ಗೈರು ಹಾಜರಾಗಿರುವುದು ಸರಿಯಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಮಕ್ಕಳ ರಕ್ಷಣೆಗಾಗಿ ಸಹಾಯವಾಣಿ ಸಂಖ್ಯೆ 1098 ಹಾಗೂ 112 ಕುರಿತಂತೆ ವ್ಯಾಪಕವಾಗಿ ಪ್ರಚುರ ಪಡಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ಎಲ್ಲ ಗ್ರಾಪಂಗಳಲ್ಲಿ ಮಹಿಳೆ ಮತ್ತು ಮಕ್ಕಳ ಕಾವಲು ಸಮಿತಿ, ಶಿಕ್ಷಣ ಕಾರ್ಯಪಡೆ ಸಮಿತಿ ರಚನೆ ಕಡ್ಡಾಯ. ಮಕ್ಕಳ ರಕ್ಷಣಾ ನೀತಿ-2016 ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕು.
ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ಸುರಕ್ಷತಾ ಸಮಿತಿಗಳಿರ ಬೇಕೆಂದರು. ಮಕ್ಕಳ ರಕ್ಷಣಾ ನೀತಿ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸೂಕ್ತ ತರಬೇತಿ ಏರ್ಪಡಿಸ ಬೇಕು. ಬಾಲ್ಯವಿವಾಹ ನಿಯಂ ತ್ರಣಕ್ಕೆ ಕ್ರಮ ವಹಿಸಬೇಕೆಂದರು. ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲೂಕು ಗಳಲ್ಲಿ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪವಿತ್ರಾ ಮತ್ತಿತರರು ಇದ್ದರು.