ನಾಪೋಕ್ಲು: ದಡಾರದಂತಹ ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸಲು ಮಿಷನ್ ಇಂದ್ರಧನುಷ್ 5.0 ಲಸಿಕಾ ಅಭಿಯಾನ ಕಾರುಗುಂದ ಅಂಗನವಾಡಿ ಕೇಂದ್ರದಲ್ಲಿ ಶನಿವಾರ ನಡೆಯಿತು.
ಕಾರ್ಯಕ್ರಮಕ್ಕೆ ಆಡಳಿತ ವೈದ್ಯಾಧಿಕಾರಿ ಪಾರ್ವತಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ದಡಾರ ಮತ್ತು ರುಬೆಲ್ಲಾ ವನ್ನು ನಿರ್ಮೂಲನೆ ಮಾಡಲು ಇಂದ್ರಧನುಷ್ 5.0 ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸಮುದಾಯದಿಂದ ರೋಗವನ್ನು ತಡೆಯಲು ಸಾಧ್ಯವಾಗಲಿದೆ. ಬಿಟ್ಟು ಹೋದ ಮತ್ತು ಹೊರಗುಳಿದ ಐದು ವರ್ಷದ ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಲಸಿಕೆ ಕೊಡಿಸಬೇಕು ಎಂದು ತಿಳಿಸಿದರು.
ಕಾರುಗುಂದ ಗ್ರಾಮ ಪಂಚಾಯಿತಿ ಸದಸ್ಯೆ ಜಯಂತಿ ಎಂ.ಕೆ. ಐಸಿಡಿಎಸ್ ಮಡಿಕೇರಿ ತಾಲೂಕು ಮೇಲ್ವಿಚಾರಕಿ ಶೀಲಾ, ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು ಭಾಗವಹಿಸಿದ್ದರು.ನೆರೆದಿದ್ದವರಿಗೆ ಆರೋಗ್ಯದ ಬಗ್ಗೆ ಹಾಗೂ ಚುಚ್ಚುಮದ್ದಿನ ಮಹತ್ವದ ಬಗ್ಗೆ ಸಮಗ್ರ ಮಾಹಿತಿ ನೀಡಲಾಯಿತು.-