ಚಿತ್ರದುರ್ಗ: ನಗರದ ಪಾರ್ಶ್ವನಾಥ ವಿದ್ಯಾಸಂಸ್ಥೆಯಲ್ಲಿ ಶನಿವಾರ ಎಲ್‌ಕೆಜಿಯಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವ್ಯವಹಾರ ಜ್ಞಾನ ಬೆಳೆಸಲು ಮೊದಲ ಬಾರಿ ಮಕ್ಕಳ ಸಂತೆ ಆಯೋಜಿಸಲಾಗಿತ್ತು.
ಮಾರುಕಟ್ಟೆಯಲ್ಲಿ ತಾಜಾ ತರಕಾರಿ, ಸೊಪ್ಪುಗಳನ್ನು ಖರೀದಿಸಿ, ನಂತರ ಶಾಲೆಯ ಅಂಗಳದಲ್ಲಿ ನಡೆದ ಮಕ್ಕಳ ಸಂತೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ವ್ಯಾಪಾರಕ್ಕೆ ಮುಂದಾದ ದೃಶ್ಯ ಕಂಡು ಬಂದಿತು.