ಚಾಮರಾಜನಗರ ತಾಲೂಕಿನ ಚಂದಕವಾಡಿಯ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿರುವ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು. ಸೋಮಣ್ಣೇಗೌಡ, ವರಲಕ್ಷ್ಮೀ ಮತ್ತು ಇತರರು ಇದ್ದರು. 
ಜಿಲ್ಲೆ

ಮಕ್ಕಳ ಸಾಂಸ್ಕೃತಿಕ, ಕ್ರೀಡಾಸಕ್ತಿಗೂ ಉತ್ತೇಜನ ನೀಡಿ

ಪಾಲಕರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಸಲಹೆ

ಚಾಮರಾಜನಗರ: ಶಿಕ್ಷಕರು ಮತ್ತು ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣದ ಜತೆಗೆ ಸಾಂಸ್ಕೃತಿಕ ಹಾಗೂ ಕ್ರೀಡೆಗಳ ಬಗೆ ಹೆಚ್ಚಿನ ಉತ್ತೇಜನ ನೀಡಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.
ತಾಲೂಕಿನ ಚಂದಕವಾಡಿಯ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿರುವ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಗುರವಾರ ಆಯೋಜಿಸಿದ್ದ ಚಂದಕವಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ-2022-23 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮಾಂತರ ಪ್ರದೇಶದ ಮಕ್ಕಳಲ್ಲಿ ಪ್ರತಿಭೆಗಳು ಅಗಾಧವಾಗಿರುತ್ತದೆ. ಇದನ್ನು ಗುರುತಿಸುವ ವೇದಿಕೆಗಳು ಅಗತ್ಯವಾಗಿತ್ತು. ಈಗ ಸರ್ಕಾರ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳ ಮೂಲಕ ವಿದ್ಯಾಭ್ಯಾಸ ಜತೆಗೆ ಸಾಂಸ್ಕೃತಿಕ, ಸಾಹಿತ್ಯಕವಾಗಿ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಆಸಕ್ತಿ ಮೂಡುವಂತೆ ಮಾಡುತ್ತಿದೆ. ಚಿಕ್ಕ ವಯಸ್ಸಿನಿಂದಲೇ ಇಂಥ ಕಲೆಗಳ ಬಗ್ಗೆ ಮಕ್ಕಳಲ್ಲಿ ಪ್ರೋತ್ಸಾಹಿಸಿದರೆ ಅವರು ಮುಂದೊಂದು ದಿನ ಬಹುದೊಡ್ಡ ಸಾಧನೆ ಮಾಡುವ ಹಂತಕ್ಕೆ ತಲುಪುತ್ತಾರೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಣ್ಣೇಗೌಡ, ಸಿಆರ್‌ಪಿ ಬಸವಣ್ಣ, ಗ್ರಾ.ಪಂ.ಅಧ್ಯಕ್ಷೆ ವರಲಕ್ಷ್ಮೀ, ಉಪಾಧ್ಯಕ್ಷ ರಾಜೇಂದ್ರ, ಕ್ಷೇತ್ರ ಸಂಪನ್ಮೂಲ ಸಮನ್ವಧಿಕಾರಿ ರಾಜೀವ್, ಪಬ್ಲಿಕ್ ಶಾಲೆ ಪ್ರಾಚಾರ್ಯ ಸ್ವಾಮಿ, ಉಪ ಪ್ರಾಚಾರ್ಯ ಸುಬ್ರಮಣ್ಯ, ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ರಂಗಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಶಿಕ್ಷಕರಾದ ಮಹದೇವಸ್ವಾಮಿ, ಸುಬ್ರಮಣ್ಯ, ರೇಣುಕಾ, ವಿದ್ಯಾರ್ಥಿಗಳು ಹಾಗೂ ಪಾಲಕರು ಇದ್ದರು.