ಚಿಕ್ಕಮಗಳೂರಿನ ಡಿಸಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಮಂಜು ಅಧ್ಯಕ್ಷತೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಶೈಲೇಂದ್ರ, ಡಾ. ಅಶ್ವಥ್ ಬಾಬು ಮತ್ತಿತರರಿದ್ದರು. 
ಜಿಲ್ಲೆ

ಮಕ್ಕಳ ಸುರಕ್ಷತಾ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಿ

ಚಿಕ್ಕಮಗಳೂರು: ಪ್ರತಿಯೊಬ್ಬರು ಮಕ್ಕಳ ಸುರಕ್ಷತಾ ನಿಯಮಗಳನ್ನು ಚಾಚು ತಪ್ಪದೆ ಪಾಲಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಮಂಜು ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಾಲ ನ್ಯಾಯ ಮಂಡಳಿಯಿAದ ದಿನದ ೨೪ ಗಂಟೆಗಳ ತುರ್ತು ಸೇವೆಯನ್ನು ಒದಗಿಸಲಾಗುತ್ತಿದ್ದು, ಸಮಸ್ಯೆಗಳಿಗೆ ತುತ್ತಾದ ಮಕ್ಕಳು ರಾಷ್ಟಿçÃಯ ಟೋಲ್ ಪ್ರೀ ನಂ. ಸಹಾಯವಾಣಿ ೧೦೯೮ಕ್ಕೆ ಕರೆ ಮಾಡಬಹುದಾಗಿದೆ. ಇತ್ತೀಚೆಗೆ ಸಮಾಜದಲ್ಲಿ ಮಕ್ಕಳ ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವುದು ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ. ಇದಕ್ಕೆ ಕಡಿವಾಣ ಹಾಕಬೇಕಾದರೆ ಸಮಾಜದ ಪ್ರತಿಯೊಬ್ಬರು ಸರ್ಕಾರ ಮಾಡಿರುವ ಕಾನೂನುಗಳನ್ನು ಗೌರವಿಸಿ ಕೈ ಜೋಡಿಸಬೇಕು ಆಗ ಮಾತ್ರ ಇಂತಹ ಸಮಸ್ಯೆಗಳನ್ನು ತೆಗುದು ಹಾಕಲು ಸಾಧ್ಯ ಎಂದು ಹೇಳಿದರು.

ಜಿಲ್ಲೆಯಲ್ಲಿ ಎಲ್ಲ ಶಾಲಾ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಶಾಲೆಗಳಲ್ಲಿನ ಮೂಲಭೂತ ಸಮಸ್ಯೆಗಳನ್ನು ನಿವಾರಿಸಿ. ಶಾಲೆ ಬಿಟ್ಟ ಮಕ್ಕಳ ಪುನರ್ವಸತಿ ಒದಗಿಸುವುದರ ಜೊತೆಗೆ ಅವರು ವಿದ್ಯಾಭ್ಯಾಸದಿಂದ ವಂಚಿತರಾಗದAತೆ ನೋಡಿಕೊಳ್ಳುವುದು ಅಧಿಕಾರಿಗಳ ಕರ್ತವ್ಯವಾಗಿದೆ ಎಂದರು.

ಪ್ರತಿ ಶಾಲಾ ಕಾಲೇಜುಗಳಲ್ಲಿ ಮಕ್ಕಳ ಸುರಕ್ಷ ಸಮಿತಿಗಳನ್ನು ನೇಮಕ ಮಾಡುವ ಜೊತೆಗೆ ಹೆಲ್ಪ್ ಲೈನ್ ೧೦೯೨ರ ಬಗ್ಗೆ ಫಲಕಗಳನ್ನು ಹಾಕಿ ಈ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಬೇಕು. ಚಿಕ್ಕ ವಯಸ್ಸಿನಲ್ಲೇ ಗರ್ಭಿಣಿಯಾಗುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಶೂನ್ಯಕ್ಕೆ ಇಳಿಸುವುದು ಅಗತ್ಯವಾಗಿದೆ. ಈ ಬಗ್ಗೆ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಅರಿವು ಮೂಡಿಸುವುದು ಹಾಗೂ ಮಕ್ಕಳ ಗ್ರಾಮ ಸಭೆ ನಡೆಸಿ ಮಕ್ಕಳಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಬೇಕು ಎಂದು ಹೇಳಿದರು.

ಬಾಲ್ಯ ವಿವಾಹ ಪ್ರೋತ್ಸಾಹ ಮಾಡುವವರ ವಿರುದ್ದ ಕಠಿಣ ಕ್ರಮ ಜರುಗಿಸುವ ಅಗತ್ಯವಿದೆ. ಸಮಾಜದಲ್ಲಿ ಉತ್ತಮ ವಾತಾವರಣ ರೂಪಿಸುವಲ್ಲಿ ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಡಿವೈಎಸ್‌ಪಿ ಶೈಲೇಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಅಶ್ವಥ್ ಬಾಬು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.