ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯನ್ನು ಮಕ್ಕಳ ಸ್ನೇಹಿ ಜಿಲ್ಲೆಯನ್ನಾಗಿಸಲು ನಾವೆಲ್ಲರೂ ಪಣ ತೊಡೋಣ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಗುರುವಾರ ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತು ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಸ್ಥೆಯಲ್ಲಿರುವ ಮಕ್ಕಳನ್ನು ನಮ್ಮ ಮಕ್ಕಳು ಎಂದು ಭಾವಿಸಿ, ಮಕ್ಕಳ ಪಾಲನೆ-ಪೋಷಣೆ, ರಕ್ಷಣೆಯಲ್ಲಿ ತೊಡಗಬೇಕು. ಬಾಲ್ಯವಿವಾಹ ಹಾಗೂ ಪೋಕ್ಸೋ ಪ್ರಕರಣಗಳಲ್ಲಿ ವಿಳಂಬ ಮಾಡದೇ ಅಽಕಾರಿಗಳು ಎಫ್.ಐ.ಆರ್ ದಾಖಲು ಮಾಡಿ. ಜಿಲ್ಲಾ ತನಿಖಾ ಸಮಿತಿ ಸದಸ್ಯರು ಮಕ್ಕಳ ಪಾಲನಾ ಸಂಸ್ಥೆಗಳಿಗೆ ನಿಯಮಿತವಾಗಿ ಭೇಟಿ ನೀಡಿ, ಮೂಲಭೂತ ಸೌಕರ್ಯಗಳು ಇರುವ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಚೇರಿಗೆ ವರದಿ ಸಲ್ಲಿಸಲು ತಿಳಿಸಿದರು.
ಮಕ್ಕಳ ಗ್ರಾಮ ಸಭೆ, ಕ್ರೀಡಾಕೂಟ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮಕ್ಕಳನ್ನು ಶಾಲಾ ವಾಹನಗಳಲ್ಲಿ ಕರೆದುಕೊಂಡು ಹೋಗಬೇಕು. ಅನಽಕೃತ ವಾಹನಗಳಲ್ಲಿ ಕರೆದುಕೊಂಡು ಹೋಗುವಂತಿಲ್ಲ. ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಬಾಲನ್ಯಾಯ ಕಾಯ್ದೆ-೨೦೧೫ರ ಕುರಿತು ತರಬೇತಿ ನೀಡಿ ಗುರುತಿನ ಚೀಟಿ ನೀಡಬೇಕು. ವಸತಿ ನಿಲಯ ಹಾಗೂ ಶಾಲೆಗಳಲ್ಲಿ ಕಡ್ಡಾಯವಾಗಿ ಮಕ್ಕಳ ಸಹಾಯವಾಣಿ-೧೦೯೮ ಹಾಗೂ ಪೊಲೀಸ ಸಹಾಯವಾಣಿ ೧೧೨ ಗೋಡೆಬರಹ ಬರೆಸಲು ಹಾಗೂ ಸಲಹಾ ಪೆಟ್ಟಿಗೆ ಇಡುವಂತೆ ಶಿಕ್ಷಣ ಇಲಾಖೆಯವರಿಗೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಪದೇ ಪದೇ ಬದಲಾವಣೆಯಾಗುತ್ತಿರುವದರಿಂದ, ಮಕ್ಕಳ ಪಾಲನೆ-ಪೋಷಣೆ, ರಕ್ಷಣೆ ಮಾಡಲು ವಿಳಂಬವಾದರೆ ನೇರವಾಗಿ ಸಂಸ್ಥೆಯ ಮುಖ್ಯಸ್ಥರೇ ಹೊಣೆಗಾರರಾಗುತ್ತಾರೆ. ಶಾಲಾ ಮಕ್ಕಳಿಗೆ ಪರಿಸರ ಪ್ರಜ್ಞೆ ಹಾಗೂ ಪರಿಸರ ಕಾಳಜಿ ಬಗ್ಗೆ ಅರಿವು ಮೂಡಿಸಿ. ಶಾಲೆಗಳಲ್ಲಿ ಮಕ್ಕಳ ಕ್ಲಬ್ ರಚನೆ ಮಾಡಿ ಪ್ರತೀ ೩ ತಿಂಗಳಿಗೊಮ್ಮೆ ಸಭೆ ನಡೆಸಿ, ವರದಿ ಸಲ್ಲಿಸಲು ಹೇಳಿದರು.
ವಲಸೆ ಕುಟುಂಬದ ಮಕ್ಕಳನ್ನು ಗುರುತಿಸಿ, ಅವರನ್ನು ಸಮೀಪದ ಶಾಲೆಗಳಿಗೆ ಸೇರಿಸುವುದು, ಸಾಮೂಹಿಕ ವಿವಾಹ ಮಾಡುವ ಸಂಸ್ಥೆಗಳ ಪಟ್ಟಿ ಮಾಡುವುದು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸ್ಥಳ ಭೇಟಿ ಮಾಡಿ ಪರಿಶೀಲನೆ ಮಾಡಲು ತಿಳಿಸಿದರು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಕ್ಕಳಿಗೆ ಪ್ರತಿಭಾ ಕಾರಂಜಿ ಹಮ್ಮಿಕೊಂಡು ಮಕ್ಕಳ ಹಕ್ಕುಗಳ ಗ್ರಾಮಸಭೆಯಲ್ಲಿ ಅವರ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಕಾರ್ಯವಾಗಬೇಕು ಎಂದರು.
ಆಯುಷ್ ಇಲಾಖೆಯಲ್ಲಿ ಮಕ್ಕಳಿಗೆ ಉಪಯುಕ್ತವಾಗುವಂತಹ ಔಷಽಯ ಸಸ್ಯಗಳ ಬಗ್ಗೆ ಅರಿವು ಮೂಡಿಸಿ. ತೀವ್ರ ಅಪೌಷ್ಠಿಕತೆ ಇವರು ಮಕ್ಕಳನ್ನು ಎನ್.ಆರ್.ಸಿ ಕೇಂದ್ರಕ್ಕೆ ಕಳುಹಿಸಿ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಮಕ್ಕಳಿಗಾಗಿ ಒದಗಿಸುವ ಸೌಲಭ್ಯಗಳಾದ ವಿಶೇಷ ಪಾಲನಾ ಯೋಜನೆ, ಪ್ರಾಯೋಜಕತ್ವ ನೀಡಬೇಕು. ತೆರೆದ ತಂಗುದಾಣ ಸಂಸ್ಥೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಬೇಕು. ಶಾಲಾ ಮಕ್ಕಳು ಸರಿಯಾದ ಸಮಯಕ್ಕೆ ಶಾಲೆಗೆ ಹೋಗಲು ಬಸ್ ಸೌಕರ್ಯ ಒದಗಿಸಿ ಕೊಡಬೇಕೆಂದು ರಸ್ತೆ ಸಾರಿಗೆ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪರಶುರಾಮ ಸಿನ್ನಾಳಕರ ಜಿ.ಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಅಮರೇಶ ಎಚ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಶ್ರೀ ಎಮ್ಮಿ, ಜಿಲ್ಲಾ ಮಕ್ಕಳ ರಕ್ಷಣಾಽಕಾರಿ ದಸ್ತಗೀರಸಾಬ ಮುಲ್ಲಾ ಸೇರಿದಂತೆ ಇತರೆ ಅಽಕಾರಿಗಳು ಉಪಸ್ಥಿತರಿದ್ದರು.