ಜಿಲ್ಲೆ

ಮಕ್ಕಳ ಹಕ್ಕುಗಳ ರಕ್ಷಣೆಗೆ ಬದ್ಧರಾಗಿ

ಗುಂಡ್ಲುಪೇಟೆ: ಮಕ್ಕಳ ಹಕ್ಕುಗಳ ರಕ್ಷಣೆ ಪಾಲಕರೂ ಸೇರಿದಂತೆ ಎಲ್ಲರ ಹೊಣೆಯಾಗಿದೆ ಎಂದು ಬನ್ನಿತಾಳಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಎನ್.ಶಿವಸ್ವಾಮಿ ಹೇಳಿದರು.


ತಾಲೂಕಿನ ಬನ್ನಿತಾಳಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ಸಮಷ್ಟಿ ಸಮಗ್ರ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.


ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಯನ್ನು ನಿಷೇಧಿಸಿ ಸರ್ಕಾರ ಕಾಯ್ದೆ ರೂಪಿಸಿದ್ದು ಇದನ್ನು ಉಲ್ಲಂಘಿಸುವವರಿಗೆ ಶಿಕ್ಷೆ ಖಚಿತ. ಆದ್ದರಿಂದ ಎಲ್ಲರೂ ಮಕ್ಕಳ ಹಕ್ಕುಗಳ ರಕ್ಷಣೆಗೆ ಬದ್ಧರಾಗಬೇಕು ಎಂದು ತಿಳಿಸಿದರು.


ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಾಯಮಣಿ ಮಲ್ಲು, ಉಪಾಧ್ಯಕ್ಷೆ ಮಂಗಳಮ್ಮ, ಸಮಷ್ಟಿ ಸಮಗ್ರ ಅಭಿವೃದ್ಧಿ ಟ್ರಸ್ಟ್ ಸಂಯೋಜಕ ಗಂಗಾಧರ್ ಇತರರು ಇದ್ದರು.