ಜಿಲ್ಲೆ

ಮಕ್ಕಳನ್ನು ಕೂಲಿ ಕೆಲಸಕ್ಕೆ ಕಳಿಸಬೇಡಿ

ಯಾದಗಿರಿ: ಸಮಾಜದಲ್ಲಿ ಬೇರೂರಿರುವ ಬಾಲಕಾಮರ್ಿಕ ಪದ್ಧತಿ ವಿರುದ್ಧ ಪ್ರತಿಯೊಬ್ಬರು ಹೋರಾಡುವ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಶ ರವೀಂದ್ರ ಎನ್.ಹೊನಲೆ ಸಲಹೆ ನೀಡಿದರು.


ಬುಧವಾರ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರ, ಕಾಮರ್ಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾಮರ್ಿಕ ನಿಮರ್ೂಲನಾ ಯೋಜನಾ ಸೊಸೈಟಿಗಳ ಸಹಯೋಗದಲ್ಲಿ ಬಾಲ ಹಾಗೂ ಕಿಶೋರ ಕಾಮರ್ಿಕ ಪದ್ಧತಿ ವಿರುದ್ಧ ಜನಜಾಗೃತಿ ಮೂಡಿಸುವ ಆಟೋ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿ, ಕೂಲಿ ಹಣದ ಆಸೆಗಾಗಿ ಮಕ್ಕಳನ್ನು ಶಿಕ್ಷಣದಿಂದ ವಂಚಿತನ್ನಾಗಿ ಮಾಡಬೇಡಿ ಎಂದರು.

ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಬೇಕು. ಅವರ ಹಕ್ಕಿನಿಂದ ದೂರ ಮಾಡಕೂಡದರು. ಸಕರ್ಾರದ ಸೌಲಭ್ಯಗಳನ್ನು ಪಡೆದು ಪಾಲಕರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು.14 ವರ್ಷದೊಳಗಿನ ಬಾಲಕಾಮರ್ಿಕ ಮತ್ತು 18 ವರ್ಷದೊಳಗಿನ ಕಿಶೋರ ಕಾಮರ್ಿಕ ಮಕ್ಕಳನ್ನು ದುಡಿಸಿಕೊಳ್ಳುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ. ಅಂಥ ಮಕ್ಕಳನ್ನು ದುಡಿಸಿಕೊಂಡಲ್ಲಿ ಮಾಲೀಕರುಗಳ ಮೇಲೆ 20 ರಿಂದ 50 ಸಾವಿರ ರೂ.ದಂಡ ಮತ್ತು 6 ತಿಂಗಳಿಂದ 2 ವರ್ಷಗಳ ವರೆಗೆ ಕಾರಾಗೃಹ ಶಿಕ್ಷೆ ವಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾಕಾರಿ ಡಾ.ಸುಶೀಲಾ ಮಾತನಾಡಿ, ಮಕ್ಕಳನ್ನು ಯಾವುದೇ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆ, ಗ್ಯಾರೇಜ್, ಕಾಖರ್ಾನೆ, ಹೋಟೆಲ್, ರೆಸ್ಟೋರೆಂಟ್, ಮನೆಗೆಲಸ ಹೀಗೆ ಯಾವುದೇ ಉದ್ಯೋಗದಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಸಲಾಗಿದೆ. ಸಂಕಷ್ಟದಲ್ಲಿರುವ ಮಕ್ಕಳ ನೆರವಿಗಾಗಿ ಸಹಾಯವಾಣಿ 1098 ಸಂಖ್ಯೆಗೆ ಕರೆ ಮಾಡಿ ಎಂದರು.