ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಹಳೆಯ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನಾಡಿ ಮೇಲ್ವಿಚಾರಕಿಯರ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ್ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಭಾಕರ ಕವಿತಾಳ ಇತರರು ಇದ್ದರು. 
ಜಿಲ್ಲೆ

ಮಕ್ಕಳಲ್ಲಿನ ಅಪೌಷ್ಠಿಕತೆ ತಡೆಗೆ ಕ್ರಮ

ಬಾಗಲಕೋಟೆ: ಅಂಗನವಾಡಿಗಳಿಗೆ ಬರುವ ಮಕ್ಕಳಲ್ಲಿನ ಅಪೌಷ್ಠಿಕತೆಯನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ್ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಹಳೆಯ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನಾಡಿ ಮೇಲ್ವಿಚಾರಕಿಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂಗನವಾಡಿ ಮೇಲ್ವಿಚಾರಕಿಯರು ಕಡ್ಡಾಯವಾಗಿ ಪ್ರತಿ ತಿಂಗಳು ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಅಪೌಷ್ಠಿಕತೆ ಇರುವ ಮಕ್ಕಳನ್ನು ಗುರುತಿಸಿ, ಅಂತಹ ಮಕ್ಕಳನ್ನು ಎನ್ ಆರ್ ಸಿ ಕೇಂದ್ರಗಳಿಗೆ ದಾಖಲಿಸಿ ಸೂಕ್ತ ಚಿಕಿತ್ಸೆಯನ್ನು ನೀಡಬೇಕು ಎಂದರು.

ಅಂಗನವಾಡಿಗಳಲ್ಲಿ ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳು ಗುಣಮಟ್ಟದಿಂದ ಕೂಡಿರಬೇಕು. ದೂರುಗಳು ಬರುತ್ತಿರುವ ಹಿನ್ನಲೆಯಲ್ಲಿ ಶಿಶುಪಾಲನಾ ಯೋಜನಾಽಕಾರಿ ಹಾಗೂ ಎಸಿಡಿಪಿಒ ಅಽಕಾರಿಗಳು ಕಡ್ಡಾಯವಾಗಿ ಅಂಗನವಾಡಿಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಬೇಕು ಎಂದು ಹೇಳಿದರು.

ಮಕ್ಕಳಿಗೆ ಮೂಲಭೂತ ಸೌಕರ್ಯಗಳಾದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಚ ಶೌಚಗೃಹ ವ್ಯವಸ್ಥೆ ಮಾಡಬೇಕು. ಗ್ರಾಮಗಳಲ್ಲಿ ನಡೆಯುವ ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಭಾಕರ ಕವಿತಾಳ ಇದ್ದರು.