ಚಿತ್ರದುರ್ಗ: ಮಕ್ಕಳಲ್ಲಿರುವ ಅಪೌಷ್ಟಿಕತೆ ಮತ್ತು ರಕ್ತಹೀನತೆಯನ್ನು ಗುರುತಿಸಿ,ನಿಯಂತ್ರಿಸುವ ಜವಾಬ್ದಾರಿ ಸಮುದಾಯ ಆರೋಗ್ಯಾಧಿಕಾರಿಗಳ ಮೇಲಿದೆ ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಹೇಳಿದರು.
ಮಕ್ಕಳ ಸುಧಾರಿತ ಪೌಷ್ಟಿಕತೆಗಾಗಿ ಹಿರಿಯೂರು ಮತ್ತು ಚಿತ್ರದುರ್ಗ ತಾಲೂಕು ಸಮುದಾಯ ಆರೋಗ್ಯಾಧಿಕಾರಿಗಳಿಗೆ ಡಿಎಚ್‌ಒ ಕಚೇರಿಯ ಲ್ಲಿ ಗುರುವಾರ ಏರ್ಪಡಿಸಿದ್ದ ತರಬೇತಿ ಕಾರ‌್ಯಾಗಾರದಲ್ಲಿ ಮಾಹಿತಿ ಕೈಪಿಡಿ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಮಕ್ಕಳಲ್ಲಿರುವ ಸಾಧಾರಣ ಹಾಗೂ ತೀವ್ರ ಅಪೌಷ್ಟಿಕತೆಯನ್ನು ತ್ವರಿತವಾಗಿ ಗುರುತಿಸಿ,ಪೌಷ್ಟಿಕ ಪುನಶ್ಚೇತನ ಕೇಂದ್ರಗಳಿಗೆ ನಿರ್ದೇಶಿಸುವ ಮೂಲಕ ಮಕ್ಕಳ ಮರಣ ದರವನ್ನು ನಿಯಂತ್ರಿಸಬೇಕೆಂದರು. ತಾಲೂಕು ಅರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಮಾತನಾಡಿ,ಪೌಷ್ಟಿಕ ಪುನಶ್ವೇತನ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದ ಮಕ್ಕಳಿಗೆ ಮರು ಭೇಟಿ ಸೇವೆಗಳನ್ನ ಬಲಪಡಿಸ ಬೇಕು. ಮಕ್ಕಳು,ಹದಿಹರೆಯದವರು,ಗರ್ಭಿಣಿ ಹಾಗೂ ಬಾಣಂತಿಯರಲ್ಲಿ ರಕ್ತ ಹೀನತೆ ತಪಾಸಣೆ ನಡೆಸಿ ಚಿಕಿತ್ಸಾ ಸೌಲಭ್ಯವನ್ನು ಕಲ್ಪಿಸಬೇಕೆಂದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯಕ್, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜೆ.ಆರ್.ಗೌರಮ್ಮ ಹಾಗೂ ತಾಲೂಕ ಆರೋಗ್ಯ ಶಿಕ್ಷ ಣಾಧಿಕಾರಿ ಎನ್.ಎಸ್.ಮಂಜುನಾಥ್ ಮಾತನಾಡಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಬಿ.ಮೂಗಪ್ಪ,ಜಾನಕಿ,ಮುಖ್ಯ ಆರೋಗ್ಯ ಮೇಲ್ವಿಚಾರಣ ಅಧಿಕಾರಿ ಎಂ.ಬಿ.ಹನುಮಂತಪ್ಪ ಮತ್ತಿತರರು ಇದ್ದರು.