ಚನ್ನರಾಯಪಟ್ಟಣ: ಮಕ್ಕಳಲ್ಲಿನ ಪ್ರತಿಭೆ ಹಾಗೂ ಶಿಕ್ಷಣವನ್ನು ಗುರುತಿಸಿ ಗೌರವಿಸಬೇಕು ಎಂದು ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕ ನಿಂಬೇಹಳ್ಳಿ ಚಂದ್ರು ಹೇಳಿದರು.
ತಾಲೂಕಿನ ಹಿರೀಸಾವೆ ಗ್ರಾಮದ ಶಾರದಾ ಅನಿಕೇತನ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಮಕ್ಕಳ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರೋತ್ಸಾಹ ಸಾಧನೆಯ ಒಂದು ಮೆಟ್ಟಿಲು ಎಂದರು.
ಮಕ್ಕಳನ್ನು ದೇವರ ಸಮಾನ ಎನ್ನುತ್ತೇವೆ. ಅದರಂತೆ ವಿದ್ಯಾರ್ಥಿಗಳ ಮನಸ್ಸಿಗೆ ನೋವು ಆಗುವಂತಹ ಶಿಕ್ಷೆ ನೀಡದೆ ನಗು ಬೆರೆಸಿ ಪಾಠಗಳನ್ನು ಕಲಿಸಬೇಕು. ಶಿಕ್ಷಣದಲ್ಲಿ ಮಾತೃಭಾ?ೆಗೂ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ.ಎಂ.ರಾಮಚಂದ್ರು ಮಾತನಾಡಿ, ಗ್ರಾಮೀಣ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಂಡು ಸಾಧನೆ ಮಾಡಬೇಕು. ಶಿಕ್ಷಣ ಸಂಸ್ಥೆಯವರು ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಂತದಲ್ಲಿ ತರಬೇತಿ ನೀಡಬೇಕು ಎಂದರು.
ಮಾತೃ ಭಾ?ೆಯಲ್ಲಿಯೂ ಸ್ಪರ್ಧಾತ್ಮಕ ಪರೀಕ್ಷೆಗೆ ಬೇಕಾದ ಪಠ್ಯ ಪುಸ್ತಕಗಳು ಇವೆ. ಶಾಲೆಯಲ್ಲಿ ಸಿಗುವ ಶಿಕ್ಷಣದ ಜತೆಗೆ ಮನೆಯಲ್ಲಿ ಮೌಲ್ಯಯುತ ಸಂಸ್ಕಾರ ಸಿಕ್ಕರೆ ಮಾತ್ರ ಮುಂದಿನ ಭವಿಷ್ಯ ಉಜ್ವಲವಾಗಿರಲು ಸಾಧ್ಯ. ಪಾಲಕರು ಮಕ್ಕಳ ಮೇಲೆ ಒತ್ತಡ ಹಾಕಬಾರದು ಎಂದು ಕಿವಿಮಾತು ಹೇಳಿದರು.
ಈ ಬಾರಿ ವೈದ್ಯಕೀಯ ಪ್ರವೇಶ ಪಡೆದಿರುವ ಎಂ.ಎಸ್.ದೀಪಕ್‌ಗೆ ಆರ್ಥಿಕ ನೆರವು ನೀಡಿ ಅಭಿನಂದಿಸಲಾಯಿತು. ಬಳಿಕ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಸಂಸ್ಥೆಯ ಮುಖ್ಯಸ್ಥರಾದ ಶ್ಯಾಮಲಾ, ಉದಯಕುಮಾರ್, ಮುಖ್ಯಶಿಕ್ಷಕ ಧರ್ಮರಾಜ್, ಉಪನ್ಯಾಸಕ ಶಶಿಧರ್, ಶಿಕ್ಷಕ ವೃಂದ ಇದ್ದರು.