ಯರಗಟ್ಟಿ: ಪವಿತ್ರವಾದ ಶ್ರಾವಣ ಮಾಸದಲ್ಲಿ ಪ್ರವಚನ ಆಲಿಸುವುದರಿಂದ ಮನಶಾಂತಿ ಲಭಿಸುತ್ತದೆ. ಪಾಲಕರು ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಬೇಕು ಎಂದು ಸಂಸದೆ ಮಂಗಲ ಅಂಗಡಿ ಹೇಳಿದರು.
ಇಲ್ಲಿನ ಶ್ರೀ ಮಹಾಂತ ದುರದುಂಡಿಶ್ವರ ಮಠದಲ್ಲಿ ಶ್ರಾವಣ ಮಾಸ ನಿಮಿತ್ತ ಬುಧವಾರ ಹಮ್ಮಿಕೊಂಡಿದ್ದ ಶರಣಬಸವೇಶ್ವರ ಪುರಾಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರಾವಣ ಮಾಸವು ಅತ್ಯಂತ ಪವಿತ್ರ ಮಾಸವಾಗಿದ್ದು, ಮಹಿಳೆಯರು ಬಿಡುವಿಲ್ಲದ ಕೆಲಸ ಕಾರ್ಯಗಳ ಜತೆಗೆ ಪೂಜಾ ಕಾರ್ಯಗಳಲ್ಲಿ ಬಹಳಷ್ಟು ತೊಡಗಿಕೊಂಡಿರುತ್ತಾರೆ. ಪುರಾಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉತ್ತಮ ವಿಚಾರ ಅಳವಡಿಸಿಕೊಳ್ಳಬೇಕು ಎಂದರು.
ಶಾಸಕ ವಿಶ್ವಾಸ ವೈದ್ಯ ಮಾತನಾಡಿ, ಮುರಗೋಡದ ಲಿಂಗೈಕ್ಯ ಮಹಾಂತ ಸ್ವಾಮೀಜಿಗಳ ಮಠದಲ್ಲಿ ಹಲವು ಧಾರ್ಮಿಕ ಕಾರ್ಯಗಳು ನಡೆಯುತ್ತವೆ. ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಕೊಡಿಸಲು ಪ್ರಯತ್ನ ಮಾಡುತ್ತೇನೆ ಎಂದರು.
ಮುನವಳ್ಳಿ ಸೋಮಶೇಖರ ಮಠದ ಮುರುಘೇಂದ್ರ ಸ್ವಾಮೀಜಿ, ರಾಜರಾಜೇಶ್ವರಿ ಆಶ್ರಮದ ಗಣಪತಿ ಮಹಾರಾಜರು, ಹಿರಿಯರಾದ ಅಶೋಕ ಹಾದಿಮನಿ, ಜಿಪಂ ಮಾಜಿ ಸದಸ್ಯ ಅಜಿತಕುಮಾರ ದೇಸಾಯಿ, ಅಶೋಕ ಜಕಾತಿ, ಈರಪ್ಪ ಹಾದಿಮನಿ, ಮಹಾದೇವಪ್ಪ ಕಾಮನ್ನವರ, ಉಮದೇವಿ ಪೂರ್ವಿಮಠ, ಮಹಾಂತೇಶ ಜಕಾತಿ, ರಾಜೇಂದ್ರ ವಾಲಿ, ಶಿವಾನಂದ ಪಟ್ಟಣಶೆಟ್ಟಿ, ವಿಜಯಕುಮಾರ ಮರಡಿ, ಟಿ.ಎಸ್. ವಾಲಿ, ಸದಾನಂದ ಹಣಬರ, ಶಿವಕುಮಾರ ಜಕಾತಿ ಇತರರು ಇದ್ದರು.