ಜಿಲ್ಲೆ

ಮಕ್ಕಳಿಗೆ ಕಡ್ಡಾಯ ಲಸಿಕೆ ಹಾಕಿಸಿ - ತಹಸೀಲ್ದಾರ್ ಡಾ. ಅಶ್ವತ್ಥ ಮನವಿ

ದಾವಣಗೆರೆ: ನಗರದ ಆರೋಗ್ಯ ಕೇಂದ್ರಗಳಲ್ಲಿ 5 ವರ್ಷದ ಒಳಗಿನ ಲಸಿಕೆ ವಂಚಿತ ಮಕ್ಕಳನ್ನು ಗುರುತಿಸಿ ಚುಚ್ಚುಮದ್ದು ಕೊಡಿಸುವಂತೆ ತಹಸೀಲ್ದಾರ್ ಡಾ. ಎಂ.ಬಿ.ಅಶ್ವತ್ಥ ತಿಳಿಸಿದರು.

ದಾವಣಗೆರೆ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಇತ್ತೀಚಿಗೆ ಹಮ್ಮಿಕೊಂಡಿದ್ದ ಇಂಧ್ರಧನುಷ್ ಲಸಿಕಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂಧ್ರ ಧನುಷ್ ಅಭಿಯಾನವು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದೆ. ನಗರ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ವಂಚಿತ ಮಕ್ಕಳನ್ನು ಗುರುತಿಸಿ ಕರೆತರಲು ಅಂಗನವಾಡಿ ಮೇಲ್ವಿಚಾರಕರು ಹಾಗೂ ಪಾಲಿಕೆ ಸಿಬ್ಬಂದಿ ಯವರು ಹೆಚ್ಚಿನ ಜವಾಬ್ದಾರಿ ಕೈಗೊಳ್ಳಬೇಕು ಎಂದು ತಿಳಿಸಿದರು.

ಅಂಗನವಾಡಿ ವ್ಯಾಪ್ತಿಯ ಮಕ್ಕಳನ್ನು ಆಶಾ ಕಾರ್ಯಕರ್ತೆಯರು ಸಮೂಹವಾಗಿ ಸಮೀಕ್ಷೆ ನಡೆಸಿ ಲಸಿಕೆ ವಂಚಿತ ಮಕ್ಕಳನ್ನು ಆಯಾ ಕೇಂದ್ರಗಳಿಗೆ ಕರೆತರುವಂತೆ ಸಂಬಂಧಿತ ಎಲ್ಲಾ ಅಧಿಕಾರಿಗಳು ಜವಾಬ್ದಾರಿ ವಹಿಸಿಕೊಳ್ಳಬೇಕೆಂದರು.

ಆರ್.ಸಿ.ಎಚ್.ಅಧಿಕಾರಿ ಡಾ. ರೇಣುಕಾರಾಧ್ಯ ಮಾತನಾಡಿ ಇಂಧ್ರಧನುಷ್ ಲಸಿಕೆ ಕಾರ್ಯಕ್ರಮವು ಸೆ.11 ರಿಂದ 16 ರವರೆಗೆ ನಡೆಯಲಿದ್ದು 5 ವರ್ಷದ ಒಳಗಿನ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ದೇವರಾಜ ಪಿ ಪಟಗೆ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಉಮಾಪತಿ, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.