ಯಾದಗಿರಿ: ಗ್ರಾಮೀಣ ಭಾಗದ ಜನತೆ ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸುವಂತೆ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಕಿವಿಮಾತು ಹೇಳಿದರು.
ಶನಿವಾರ ತಾಲೂಕಿನ ಆರ್. ಹೊಸಳ್ಳಿ ತಾಂಡಾದಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕೆಕೆಆರ್ಡಿಬಿಯಿಂದ ಮಂಜೂರಾದ ಮೂರು ನೂತನ ಕೋಣೆಗಳ ನಿಮರ್ಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಗ್ರಾಮೀಣ ವಿದ್ಯಾಥರ್ಿಗಳು ಉನ್ನತ ಶಿಕ್ಷಣ ಪಡೆದುಕೊಳ್ಳಬೇಕು ಎಂಬ ಕಾರಣಕ್ಕಾಗಿ ಸರಕಾರ ಉಚಿತ ಶಿಕ್ಷಣ ಕೊಡುತ್ತಿದೆ. ವಿಶೇಷವಾಗಿ ಪಾಲಕರು ತಮ್ಮ ಹೆಣ್ಣು ಮಕ್ಕಳಿಗೆ ತಪ್ಪದೇ ಶಾಲೆಗೆ ಕಳಿಸಬೇಕು ಎಂದು ಸಲಹೆ ನೀಡಿದರು.
ಶಿಕ್ಷಕರು ವಿಧ್ಯಾಥರ್ಿಗಳಿಗೆ ಗುಣಮಟ್ಟದ ಶಿಕ್ಷಣ ಕೊಡಬೇಕು. ಮಕ್ಕಳಲ್ಲಿರುವ ಸೃಜನಶೀಲತೆ ಗುರುತಿಸುವ ಕೆಲಸ ಮಾಡಬೇಕು. ಮಕ್ಕಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಲು ಪ್ರೇರಣೆ ನೀಡಬೇಕು. ಶಾಲೆಯಲ್ಲಿ ಬಿಸಿಯೂಟ ಸೇರಿದಂತೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ನಿದರ್ೇಶನ ನೀಡಿದರು.
ನಮ್ಮದು ನುಡಿದಂತೆ ನಡೆಯುವ ಸರಕಾರ. ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಕ್ಷಣ, ಆರೋಗ್ಯ ಮತ್ತು ಮೂಲಸೌಲಭ್ಯದ ಬಗ್ಗೆ ಹೆಚ್ಚಿನ ಒತ್ತು ಕೊಡುತ್ತಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿನ ಎಲ್ಲ ಶಾಲೆಗಳಿಗೆ ಅಗತ್ಯ ಸೌಲಭ್ಯ ಒದಗಿಸಲಾಗುವುದು ಎಂದು ಹೇಳಿದರು.