ಜಿಲ್ಲೆ

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿ : ಸಿ.ಎನ್. ಮಂಜೇಗೌಡ

Mysuru

ಮೈಸೂರು: ಮಕ್ಕಳಿಗೆ ಪಾಲಕರು ಗುಣಮಟ್ಟದ ಶಿಕ್ಷಣ ಕೊಡಿಸುವ ಜತೆಗೆ ದೇಶದ ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು.

ಶ್ರೀರಾಂಪುರದ ಸೆಂಟ್ ಮರಿಯಾ ದಿ ಮಥಾಯಸ್ ಕಿಡ್ಸ್ ವರ್ಡ್ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಶಾಲೆಯ ವಾರ್ಷಿಕೋತ್ಸವ ಹಾಗೂ ಪದವಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿ, ಎಲ್ಲ ವಿದ್ಯಾರ್ಥಿಗಳಿಗೆ ಸರ್ಕಾರವೇ ಶಿಕ್ಷಣ ನೀಡಲು ಸಾಧ್ಯವಿಲ್ಲ. ಮಕ್ಕಳಿಗೆ ಶಿಕ್ಷಣ ನೀಡುವ ವಿಚಾರದಲ್ಲಿ ಕ್ರೈಸ್ತ ಶಿಕ್ಷಣ ಸಂಸ್ಥೆಗಳು, ಮಠ್ಯ ಮಾನ್ಯಗಳ ಪಾತ್ರ ಮಹತ್ತರವಾದದ್ದು ಎಂದು ಹೇಳಿದರು.

ವಿದ್ಯಾರ್ಥಿಗಳು ಉತ್ತಮ ಗುರಿ ಇಟ್ಟುಕೊಂಡು ಮುನ್ನಡೆಯಬೇಕು. ಶ್ರದ್ಧೆಯಿಂದ ಓದಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಸರ್ಕಾರ, ಸಮಾಜ ಹಾಗೂ ಪಾಲಕರ ಜವಾಬ್ದಾರಿಯಾಗಿದೆ ಎಂದರು.

ಸಮಾರಂಭದಲ್ಲಿ ಫಾದರ್ ವಿನ್ಸೆಂಟ್, ಸಿಸ್ಟರ್‌ಗಳಾದ ಮಿನಿ, ಮೇರಿ, ಸಿಲಿನ್, ಜೀಜಿ, ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಅವರ ಆಪ್ತ ಸಹಾಯಕ ಎಚ್.ಎ. ಸುರೇಂದ್ರ ಅನಿಲ್ ಹಾಗೂ ಇತರರು ಇದ್ದರು.