ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಅನುಭವ ಮಂಟಪದಲ್ಲಿ ನಡೆದ ಮಾಂಟೆಸ್ಸರಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಪ್ಪ ಹಳ್ಳದ ಉದ್ಘಾಟಿಸಿದರು. ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು, ಶ್ರೀ ಗುರುಬಸವ ಪಟ್ಟದ್ದೇವರು, ಶ್ರೀ ಮಹಾಲಿಂಗ ಸ್ವಾಮೀಜಿ, ಮೋಹನ ರೆಡ್ಡಿ, ಬಸವರಾಜ ಮೊಳಕೀರೆ, ಡಾ.ವಿಲಾಸ ಕನಸೆ, ಡಾ.ಉದ್ಧವ ಕನಸೆ, ಶಿಲ್ಪಾ ಶಿವಾನಂದ ಪವಡಶೆಟ್ಟಿ ಇತರರಿದ್ದರು. 
ಜಿಲ್ಲೆ

ಮಕ್ಕಳಿಗೆ ಪಾಲಕರು ಸಮಯ ನೀಡಲಿ

ಭಾಲ್ಕಿ: ತರಗತಿಗಳಲ್ಲಿ ಶಿಕ್ಷಕರು ಹೇಳಿ ಕೊಡುವುದನ್ನು ಆಸಕ್ತಿಯಿಂದ ಕಲಿಯುವಂತೆ ಪ್ರೇರೇಪಿಸಬೇಕು ಜತೆಗೆ ಪಾಲಕರು ಮನೆಗಳಲ್ಲಿ ಮಕ್ಕಳ ಕಲಿಕೆಗೆ ಸಮಯ ಕೊಡುವುದು ಬಹಳ ಮುಖ್ಯ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾದ ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ನುಡಿದರು.

ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ ಅನುಭವ ಮಂಟಪದಲ್ಲಿ ಗುರುವಾರ ಆಯೋಜಿಸಿದ್ದ ಮಾಂಟೆಸ್ಸರಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಬಾಲ್ಯದಿಂದಲೇ ಮಕ್ಕಳಲ್ಲಿ ಶೈಕ್ಷಣಿಕ ಅಭಿರುಚಿ ಜತೆಗೆ ಉತ್ತಮ ಸಂಸ್ಕಾರ ಕಲಿಸಿ ಕೊಡುವ ಸದುದ್ದೇಶದಿಂದ ಮಾಂಟೆಸ್ಸರಿ ಶಾಲೆ ಪ್ರಾರಂಭಿಸಲಾಗಿದೆ. ಇಲ್ಲಿ ಮಕ್ಕಳಿಗೆ ಬ್ಯಾಗ, ಪುಸ್ತಕ, ಮನೆಪಾಠ ರಹಿತ ಶಿಕ್ಷಣ ಹೇಳಿಕೊಡಲಾಗುತ್ತಿದೆ. ಇದು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುತ್ತದೆ. ಪಾಲಕರು ಎಷ್ಟೇ ಒತ್ತಡ, ಕೆಲಸ ಇದ್ದರೂ ಕೂಡ ಮನೆಯಲ್ಲಿ ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕು. ಇದು ಮಕ್ಕಳ ಉತ್ತಮ ಬೆಳವಣಿಗೆಗೆ ಸಹಕಾರಿ ಆಗುತ್ತದೆ ಎಂದು ತಿಳಿಸಿದರು.

ನೇತೃತ್ವ ವಹಿಸಿದ್ದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಮಾತನಾಡಿ, ಮಕ್ಕಳ ಸರ್ವಾಂಗೀಣ ವಿಕಾಸದಲ್ಲಿ ಶಿಕ್ಷಕರದ ಜತೆಗೆ ಪಾಲಕರ ಹೊಣೆಗಾರಿಕೆಯು ಹೆಚ್ಚಿದೆ ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಪ್ಪ ಹಳ್ಳದ ಮಾತನಾಡಿ, ಪೂಜ್ಯರ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳಿಗೆ ಗುರುಕುಲ ಮಾದರಿ ಶಿಕ್ಷಣ ನೀಡಲಾಗುತ್ತಿದೆ. ಪಾಲಕರು ಮಕ್ಕಳ ಕಲಿಕೆಗೆ ಸಹಕರಿಸಬೇಕು ಎಂದು ತಿಳಿಸಿದರು.

ಶಿಲ್ಪಾ ಶಿವಾನಂದ ಪವಾಡಶೆಟ್ಟಿ ಮಾತನಾಡಿದರು. ಡಾ.ವಿಲಾಸ ಕನಸೆ ಬಸವ ಗುರುವಿನ ಪೂಜೆ ನೆರವೇರಿಸಿದರು. ಆಡಳಿತಾಧಿಕಾರಿ ಮೋಹನ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು.

ಪುರಸಭೆ ಅಧ್ಯಕ್ಷೆ ಶಶಿಕಲಾ ಅಶೋಕ, ಎಂಜಿಎಸ್ ಎಸ್ ಕೆ ನಿರ್ದೇಶಕ ಶಿವಶಂಕರ ಪಾಟೀಲ್, ಡಾ.ಸೃಜಲ ಬಳತೆ, ಡಾ.ಉದ್ಧವ ಕನಸೆ, ವಿನೋದ ಲೊಯಾ, ಪ್ರಾಚಾರ್ಯರಾದ ಬಸವರಾಜ ಮೊಳಕೀರೆ, ಎನ್.ರಾಜು ಇತರರಿದ್ದರು. ಪ್ರಾಚಾರ್ಯ ಜಯಲಕ್ಷ್ಮೀ ಸ್ವಾಗತಿಸಿ ನಿರೂಪಣೆ ಮಾಡಿದರು.

ಪ್ರಾಥಮಿಕ ಹಂತದಲ್ಲಿ ನೀಡುವ ಶಿಕ್ಷಣ ಮಕ್ಕಳಿಗೆ ಭದ್ರ ಬುನಾದಿ ಒದಗಿಸುತ್ತದೆ. ಹಾಗಾಗಿ ಶಿಕ್ಷಕರ ಜತೆಗೆ ಪಾಲಕರು ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕು.

| ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು

ಹಿರೇಮಠ ಸಂಸ್ಥಾನ ಭಾಲ್ಕಿ