ಹುಮನಾಬಾದ್ ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ಆಯೋಜಿಸಿದ್ದ ಬಸವ ಜಯಂತ್ಯುತ್ಸವವನ್ನು ಸ್ಥಳೀಯ ಹಿರೇಮಠದ ಶ್ರೀ ರೇಣುಕ ಗಂಗಾಧರ ಶಿವಾಚಾರ್ಯರು ಉದ್ಘಾಟಿಸಿದರು. ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್, ಮಾಜಿ ಸಚಿವ ರಾಜಶೇಖರ ಪಾಟೀಲ್, ಎಂಎಲ್ಸಿಗಳಾದ ಡಾ.ಚಂದ್ರಶೇಖರ ಪಾಟೀಲ್, ಭೀಮರಾವ ಪಾಟೀಲ್, ಮಾಜಿ ಶಾಸಕ ಸುಭಾಷ ಕಲ್ಲೂರ, ಪ್ರಮುಖರಾದ ಬಸವಕುಮಾರ ಪಾಟೀಲ್, ಅಭಿಷೇಕ ಪಾಟೀಲ್, ಸುನೀಲ ಪಾಟೀಲ್ ಇತರರಿದ್ದರು. 
ಜಿಲ್ಲೆ

ಮಕ್ಕಳಿಗೆ ಬಸವಣ್ಣನವರ ವಚನ ಕಲಿಸಿ

ಹುಮನಾಬಾದ್: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವ ಜಯಂತಿ ಉತ್ಸವ ಸಮಿತಿಯಿಂದ ಶುಕ್ರವಾರ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರ ಜಯಂತ್ಯುತ್ಸವ ವೈಶಿಷ್ಟ್ಯಪೂರ್ಣವಾಗಿ ಅದ್ದೂರಿಯಿಂದ ಜರುಗಿತು.

ಸಾನ್ನಿಧ್ಯ ವಹಿಸಿದ್ದ ಸ್ಥಳೀಯ ಹಿರೇಮಠದ ಶ್ರೀ ರೇಣುಕ ಗಂಗಾಧರ ಶಿವಾಚಾರ್ಯರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಸವಣ್ಣನವರು ಮಾನವ ಜೀವನದ ಏಳಿಗೆಗೆ ಅವಕಶ್ಯಕವಿರುವ ತತ್ವ ನೀಡಿದ್ದಾರೆ. ನಾವೆಲ್ಲರೂ ಬಸವಣ್ಣನವರ ವಚನಗಳನ್ನು ಅಳವಡಿಸಿಕೊಂಡು ಮಕ್ಕಳಿಗೆ ತಿಳಿಸಿಕೊಡುವುದು ಅಗತ್ಯವಾಗಿದೆ ಎಂದರು.

ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಮಾತನಾಡಿ, ಬಸವಣ್ಣನವರು ಸಮಾನತೆ ಹರಿಕಾರ. ಪ್ರಜಾಪ್ರಭುತ್ವದ ಪರಿಕಲ್ಪನೆ ೧೨ನೇ ಶತಮಾನದಲ್ಲಿಯೇ ಅನುಭವ ಮಂಟಪ ಮೂಲಕ ಬಸವಣ್ಣನವರು ನೀಡಿದ್ದಾರೆ. ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.ಬಸವ ಜಯಂತಿ ಉತ್ಸವ ಸಮಿತಿಯವರು ಈ ಭಾರಿ ಉತ್ಸವ ಉತ್ತಮ ರೀತಿಯಿಂದ ಮಾಡಿರುವುದು ಶ್ಲಾಘನೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಾಜಿ ಸಚಿವ ರಾಜಶೇಖರ ಪಾಟೀಲ್ ಮಾತನಾಡಿ, ಜಗಜ್ಯೋತಿ ಬಸವಣ್ಣನವರು ವಚನಗಳ ಮೂಲಕ ಅದ್ಬುತವಾದ ತತ್ವಾದರ್ಶಗಳನ್ನು ನೀಡಿದ್ದಾರೆ. ಕಾಯಕವೇ ಕೈಲಾಸ, ಮೇಲುಕಿಳಿಲ್ಲ ಎಲ್ಲರೂ ಸರಿಸಮಾನರು ಎಂಬುದು ತೋರಿಸಿಕೊಟ್ಟಿದ್ದಾರೆ. ಬಸವಣ್ಣ, ಅಂಬೇಡ್ಕರ್ ತತ್ವಗಳನ್ನು ಜೀವನದಲ್ಲಿ ಅಳಡಿಸಿಕೊಂಡು ಸುಂದರ ಬದುಕು ಸಾಗಿಸಬೇಕು ಎಂದರು.

ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ ಪಾಟೀಲ್ ಮಾತನಾಡಿ, ಬಸವಣ್ಣನವರ ತತ್ವ ಸಂದೇಶಗಳ ಕುರಿತು ಉಪನ್ಯಾಸ ನೀಡಿದರು.

ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ಅಭಿಷೇಕ ಪಾಟೀಲ್ ಪ್ರಾಸ್ತಾವಿಕ ಮಾತನಾಡಿದರು. ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್, ಭೀಮರಾವ ಪಾಟೀಲ್, ಮಾಜಿ ಶಾಸಕ ಸುಭಾಷ ಕಲ್ಲೂರ, ಮಾಜಿ ಜಿಪಂ ಸದಸ್ಯ ವೀರಣ್ಣ ಪಾಟೀಲ್, ಪುರಸಭೆ ಅಧ್ಯಕ್ಷೆ ಪಾರ್ವತಿಬಾಯಿ ಶೇರಿಕಾರ, ಉಪಾಧ್ಯಕ್ಷ ಮುಕ್ರಂ ಜಾ, ಉತ್ಸವ ಸಮಿತಿ ಗೌರವಾಧ್ಯಕ್ಷ ಸುನೀಲ ಪಾಟೀಲ್, ಜಿಪಂ ಮಾಜಿ ಉಪಾಧ್ಯಕ್ಷ ಲಕ್ಷ್ಮಣರಾವ ಬುಳ್ಳಾ, ತಾಪಂ ಮಾಜಿ ಅಧ್ಯಕ್ಷ ರಮೇಶ ಡಾಕುಳಗಿ, ಪ್ರಮುಖರಾದ ಅಫ್ಸರಮಿಯಾ, ಮಲ್ಲಿಕಾರ್ಜುನ ಮಾಶೆಟ್ಟಿ, ಮಹೇಶ ಅಗಡಿ, ಮಲ್ಲಿಕಾರ್ಜುನ ಸೀಗಿ, ಶ್ರೀಕಾಂತ ತಾಂಡೂರ, ಸುಭಾಷ ಭಗೋಜಿ, ಶ್ರೀನಾಥ ದೇವಣಿ, ಜಗದೀಶ ಭಾವಿ, ಮಲ್ಲು ಗಡ್ಡಲ್​, ಮಲ್ಲು ಮರೂರು, ವಿನೋದ, ಬಾಬುರಾವ ಪೊಚಂಪಳ್ಳಿ, ಡಾ.ಎಸ್.ಆರ್.ಮಠಪತಿ, ಬಸವರಾಜ ರುದ್ರವಾಡಿ, ಚನ್ನಬಸಪ್ಪ ವಡ್ಡನಕೇರಿ ಇದ್ದರು. ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಸಂಗಮಕರ ನಿರೂಪಣೆ ಮಾಡಿದರು.

ನಗೆಹಬ್ಬ ಕಾರ್ಯಕ್ರಮದಲ್ಲಿ ಖ್ಯಾತ ಹಾಸ್ಯ ಕಲಾವಿದರಾದ ಗಂಗಾವತಿ ಪ್ರಾಣೇಶ, ನರಸಿಂಹ ಜೋಶಿ, ಬಸವರಾಜ ಮಹಾಮನಿ ತಮ್ಮ ಕಲೆ ಮೂಲಕ ಜನರನ್ನು ಮನರಂಜಿಸಿದರು.

ಭವ್ಯ ಮರವಣಿಗೆ: ಬಸವ ಜಯಂತಿ ಉತ್ಸವ ನಿಮಿತ್ತ ಪಟ್ಟಣದ ಥೇರ್ ಮೈದಾನದಿಂದ ಅಂಬೇಡ್ಕರ್, ಸರ್ದಾರ್ ಪಟೇಲ್, ಬಾಲಜಿ ಮಂದಿರ ವೃತ್ತದ ಮೂಲಕ ಬಸವೇಶ್ವರ ವೃತ್ತದವರೆಗೆ ತೆರದ ವಾಹನದಲ್ಲಿ ಬಸವೇಶ್ವರ ಮೂರ್ತಿ ಭವ್ಯ ಮರವಣಿಗೆ ಜರುಗಿತು. ಮೆರವಣಿಗೆ ಉದ್ದಕ್ಕೂ ಡೊಳ್ಳು ಕುಣಿತ, ಬ್ಯಾಂಡ್ ಭಜಂತ್ರಿ ಜತೆ ಗಣ್ಯರು ಹಾಗೂ ಭಕ್ತರು ವಚನ ಗಾಯನದ ಮೇಲೆ ನೃತ್ಯ ಮಾಡಿ ಗಮನ ಸೆಳೆದರು.