ಜಿಲ್ಲೆ

ಮಕ್ಕಳಿಗೆ ಸಂವಿಧಾನದ ಪರಿಚಯ ಮಾಡಿಸಿ

Yadgiri - Laxmikanth Kulkarni


ಯಾದಗಿರಿ: ದೇಶದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠವಾಗಿದ್ದು, ನಮ್ಮ ಮಕ್ಕಳಿಗೆ ಆ ಗ್ರಂಥದ ಪರಿಚಯ ಮಾಡಿಕೊಡುವುದು ಪ್ರತಿಯೊಬ್ಬ ಪಾಲಕರ ಕರ್ತವ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರ ಎಲ್. ಹೊನೋಲೆ ತಿಳಿಸಿದರು.

ನಗರದ ಸರಕಾರಿ ಕನ್ಯಾ ಪ್ರೌಢಶಾಲೆಯಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪಾಧಿಕಾರ, ಕಾರ್ಮಿಕಇಲಾಖೆ, ಪೋಲಿಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಸಹಯೋಗದಲ್ಲಿ ಆಯೋಜಿಸಿದ್ದ ಬಾಲಕಾಮರ್ಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ತಿದ್ದುಪಡಿ ಕುರಿತ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿ ಮಗುವು ತನ್ನ ಹಕ್ಕುಗಳಿಂದ ವಂಚಿತ ಆಗದಂತೆ ನೋಡಿಕೊಳ್ಳುವುದು ನಾಗರಿಕರ ಜವಬ್ದಾರಿಯಾಗಿದೆ ಎಂದರು.


ಶಿಶು ಯೋಜನಾ ಅಭಿವೃದ್ಧಿ ಅಧಿಕಾರಿ ಲಾಲ್ಸಾಬ್ ಮಾತನಾಡಿ, ಜಿಲ್ಲೆಯಲ್ಲಿ ಬಾಲಕಾಮರ್ಿಕ ಪದ್ದತಿ ಮತ್ತು ಬಾಲ್ಯ ವಿವಾಹ ತಡೆಯಲು ಸಾಕಷ್ಟು ಶ್ರಮಿಸಲಾಗುತ್ತಿದೆ. ಈ ಕೆಲಸಕ್ಕೆ ಪ್ರತಿಯೊಬ್ಬ ವಿದ್ಯಾಥರ್ಿಯ ಮತ್ತು ಪೋಷಕರ ಸಹಕಾರ ಅತೀಮುಖ್ಯ ಎಂದು ಹೇಳಿದರು.