ಮದ್ದೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕ್ರೀಡಾಕೂಟವನ್ನು ಶಾಸಕ ಕೆ.ಎಂ.ಉದಯ್ ಉದ್ಘಾಟಿಸಿದರು. ಸಿ.ಎಚ್.ಕಾಳೀರಯ್ಯ, ರವೀಶ್, ರವಿಕುಮಾರ್, ಎನ್.ಸಿ.ರಾಜು, ನಾಗೇಶ್, ರಮೇಶ್‌ಪ್ರಭು ಇದ್ದರು. 
ಜಿಲ್ಲೆ

ಮಕ್ಕಳು ಶೈಕ್ಷಣಿಕ ಅವಧಿಯಲ್ಲೇ ಕ್ರೀಡೆಯಲ್ಲಿ ತೊಡಗಲಿ

ಮದ್ದೂರು: ಮಕ್ಕಳು ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಿರಬೇಕಾದರೆ ಕ್ರೀಡಾ ಚಟುವಟುಕೆಗಳಲ್ಲಿ ಭಾಗವಹಿಸುವುದು ಅವಶ್ಯಕ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.


ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಿಂದ ಶನಿವಾರ ಆಯೋಜಿಸಿದ್ದ ಹಿರಿಯ ಪ್ರಾಥಮಿಕ ಶಾಲೆಗಳ ಮತ್ತು ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.


ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ಹಂತದಲ್ಲಿಯೇ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ದೀರ್ಘಕಾಲ ಆರೋಗ್ಯಯುತವಾಗಿ ಮತ್ತು ನೆಮ್ಮದಿಯಾಗಿ ಜೀವಿಸಬಹುದು ಎಂದು ಸಲಹೆ ನೀಡಿದರು.


ವ್ಯಾಯಾಮ, ಯೋಗಾ, ಪ್ರಾರ್ಥನೆ, ಮಾನವನ ಅವಿಭಾಜ್ಯ ಅಂಗವಾಗಿದ್ದು, ಜತೆಗೆ ನಿರಂತರವಾಗಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.


ಬಿಇಒ ಸಿ.ಎಚ್.ಕಾಳೀರಯ್ಯ ಮಾತನಾಡಿ, ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಖೋ ಖೋ, ಕಬಡ್ಡಿ, ವಾಲಿಬಾಲ್, ಥ್ರೋ ಬಾಲ್ ಸೇರಿದಂತೆ ಇತರ ಕ್ರೀಡಾ ಚಟುವಟಿಕೆಗಳನ್ನು ನಿರಂತರವಾಗಿ ಇಲಾಖೆ ವತಿಯಿಂದ ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ ನೀಡಲಾಗುತ್ತದೆ. ಮಕ್ಕಳು ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಮನೋಚೈತನ್ಯ ಬೆಳೆಸಿಕೊಳ್ಳಲಿದ್ದಾರೆ ಎಂದರು.


ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರವೀಶ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ರವಿಕುಮಾರ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ನಾಗೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದೇವರಾಜು, ರಾಜ್ಯ ದೈಹಿಕ ಶಿಕ್ಷಕರ ಸಂಘದ ಉಪಾಧ್ಯಕ್ಷ ಎಸ್.ಕುಮಾರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ಎಸ್.ರಮೇಶ್‌ಪ್ರಭು, ಕ್ಷೇತ್ರ ಸಮನ್ವಯಾಧಿಕಾರಿ ಹನುಮಶೆಟ್ಟಿ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಎನ್.ಸಿ.ರಾಜು ಇತರರು ಇದ್ದರು.