ಜಿಲ್ಲೆ

ಮಕ್ಕಳೊಡನೆ ವಿನಮ್ರತೆಯಿಂದ ವರ್ತಿಸಿ

ಬಳ್ಳಾರಿ : ವಸತಿ ನಿಲಯಗಳ ನಿಲಯಪಾಲಕರು, ಮೇಲ್ವಿಚಾರಕರು ಹಾಗೂ ವಾರ್ಡನ್‌ಗಳು ಸಹ ಪೋಷಕರಿದ್ದಂತೆ. ಹೀಗಾಗಿ ಮಕ್ಕಳೊಡನೆ ವಿನಮ್ರತೆಯಿಂದ ವರ್ತಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ನ್ಯಾ.ಕೆ.ಜಿ ಶಾಂತಿ ತಿಳಿಸಿದರು.
ನಗರದ ಜಿಪಂ ನಜೀರ್ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಹಯೋಗದೊಂದಿಗೆ ಮಕ್ಕಳ ರಕ್ಷಣಾ ನೀತಿ 2016 (ಪರಿಷ್ಕರಣೆ-2023), ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೊ ಕಾಯ್ದೆ ಕುರಿತು ವಸತಿ ನಿಲಯಗಳ ನಿಲಯಪಾಲಕರಿಗೆ, ನಿಲಯ ಮೇಲ್ವಿಚಾರಕರು, ವಸತಿ ಶಾಲೆಗಳ ಪ್ರಾಂಶುಪಾಲರು, ದೈಹಿಕ ಶಿಕ್ಷಕರು ಹಾಗೂ ವಾರ್ಡನ್‌ಗಳಿಗೆ ಗುರುವಾರ ನಡೆದ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಫಲಿತಾಂಶದ ತರಾತುರಿಯಲ್ಲಿ ಮಕ್ಕಳ ಮೇಲೆ ಒತ್ತಡ ಹೇರದೇ, ಮಕ್ಕಳಲ್ಲಿನ ಲೋಪದೋಷಗಳನ್ನು ಅರಿತುಕೊಂಡು ಈ ಕುರಿತು ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು. ಕಾಯ್ದೆಗಳು ಇದ್ದರೆ ಸಾಲದು ಅದರ ಅನುಷ್ಠಾನ ಕುರಿತು ಸಾರ್ವಜನಿಕರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಇಲಾಖೆಗಳಿಂದ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದರು. ಬಾಲ್ಯವಿವಾಹ ಪದ್ದತಿಯು ಬಡತನ, ಕೌಟುಂಬಿಕ ಕಲಹ, ಕಾನೂನಿನ ಅರಿವು ಇಲ್ಲದೆ ಪ್ರಾಚೀನ ಕಾಲದಿಂದಲೂ ನಡೆಯುತ್ತಲಿದ್ದು, ಮಾಹಿತಿ ಪ್ರಕಾರ 1993ರಲ್ಲಿ ಶೇ.49, 2021ರಲ್ಲಿ ಶೇ.22, 2022ರಲ್ಲಿ ಶೇ.15 ರಷ್ಟಂತೆ ಗಣನೀಯವಾಗಿ ಇಳಿಮುಖ ಕಂಡುಬರುತ್ತಿದೆ. ಮಹಿಳೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವು ಇತ್ತೀಚಿನ ದಿನಮಾನಗಳಲ್ಲಿ ಹೆಚ್ಚಾಗುತ್ತಿದ್ದು, ರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಹಿಳೆಯರು ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ. 12-17 ವಯಸ್ಸಿನ 4,50,207 ಮಕ್ಕಳು ಶೇ.34 ರಷ್ಟು ಕಿರುಕುಳಕ್ಕೆ ಒಳಗಾಗಿದ್ದು, ಅದರಲ್ಲಿ ಹೆಚ್ಚು ಪರಿಚಿತರಿಂದಲೇ ಶೇ.50ರಷ್ಟು ಮಕ್ಕಳು ಮತ್ತು ಮಹಿಳೆಯರು ಕಿರುಕುಳಕ್ಕೆ ಒಳಗಾಗಿರುವ ಪ್ರಕರಣಗಳಿವೆ ಎಂದು ಹೇಳಿದರು.
ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಮಾತನಾಡಿ, ವಸತಿನಿಲಯಗಲ್ಲಿ ಮೂಲಭೂತ ಸೌಕರ್ಯದೊಂದಿಗೆ ಮಕ್ಕಳ ರಕ್ಷಣೆಗೆ ಒತ್ತುನೀಡಿ, ಉತ್ತಮ ಶಿಕ್ಷಣ ಒದಗಿಸುವುದು ನಿಲಯಪಾಲಕರ ಪಾತ್ರ ಬಹುಮುಖ್ಯವಾಗಿದೆ ಎಂದು ಹೇಳಿದರು.
ಕೊಪ್ಪಳದ ಯುನಿಸೆಫ್ನ ಮಕ್ಕಳ ಸಂರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ರಾಘವೇಂದ್ರ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿಶೇಷ ಉಪನ್ಯಾಸ ನೀಡಿದರು.
ಪ್ರಮುಖರಾದ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣಾಧಿಕಾರಿ ವಿಠೋಬ ಹೊನಕಾಂಡೆ