ಜಿಲ್ಲೆ

ಮಕ್ಳಳನ್ನು ಶಿಕ್ಷಣವಂತರನ್ನಾಗಿ ಮಾಡಿ

ಬಳ್ಳಾರಿ : ಜೀವನ ಸುಧಾರಣೆಗೊಳ್ಳಬೇಕೆಂದರೆ ಮಕ್ಕಳಿಗೆ ಶಿಕ್ಷಣ ಒದಗಿಸಿ ವಿದ್ಯಾವಂತರನ್ನಾಗಿ ಮಾಡಬೇಕು ಎಂದು ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಹೇಳಿದರು.
ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಸೋಮವಾರ ನಡೆದ ನುಲಿಯ ಚಂದಯ್ಯ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹನ್ನೆರಡನೇ ಶತಮಾನದ ವಚನಕಾರರಲ್ಲಿ ಒಬ್ಬರಾದ ನುಲಿಯ ಚಂದಯ್ಯನವರು ಮಹಾನ್ ಕಾಯಕಯೋಗಿ ಆಗಿದ್ದರು. ಅವರು ತಮ್ಮ ವಚನಗಳ ಮೂಲಕ ಧಾರ್ಮಿಕ ಮತ್ತು ಸಾಮಾಜಿಕ ಚಿಂತನೆಗಳನ್ನು ಸಾರಿ, ಜನ ಸಾಮಾನ್ಯರಲ್ಲಿ ಭಾವೈಕ್ಯತೆಯ ಅರಿವು ಮೂಡಿಸಿದರು. ಅವರ ಆಚಾರ-ವಿಚಾರ, ಕೊಡುಗೆಗಳನ್ನು ಸ್ಮರಿಸುವುದು ಅವಶ್ಯಕವಾಗಿದೆ. ಸಮಾಜದಲ್ಲಿನ ಜಾತಿ ವ್ಯವಸ್ಥೆ ಸೇರಿದಂತೆ ಅನ್ಯಾಯದ ವಿರುದ್ಧ ಧ್ವನಿಎತ್ತಿ, ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಸಮಾಜ ಹಾಗೂ ಜನ ಸಾಮಾನ್ಯರ ಏಳಿಗೆಗಾಗಿ ಪರಿತಪಿಸಿದ ವಿವಿಧ ಮಹನೀಯರ ವಿಚಾರಧಾರೆಗಳನ್ನು ಪಾಲಿಸಿ, ಉತ್ತಮ ಜೀವನ ನಡೆಸಬೇಕು. ಎಲ್ಲರೂ ಸಂಘಟಿತರಾಗಿ ದುಶ್ಚಟಗಳಿಂದ ದೂರವಿದ್ದು, ಸರ್ಕಾರ ಯೋಜನೆಗಳನ್ನು ಸದುಪಯೋಗಪಡೆದುಕೊಳ್ಳಬೇಕು ಎಂದು ತಿಳಿಸಿದರು. ಬಳಿಕ ನಿವೃತ್ತ ಶಿಕ್ಷಕ ಕೆ.ಹನುಮಂತಪ್ಪ ವಿಶೇಷ ಉಪನ್ಯಾಸ ನೀಡಿದರು.