ಜಿಲ್ಲೆ

ಮೆಟ್ಟೂರು ಜಲಾಶಯಕ್ಕೆ ಬಾಗಿನ ಅರ್ಪಣೆ

  • ಹನೂರು: ತಮಿಳುನಾಡಿನ ಮೆಟ್ಟೂರು ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಶನಿವಾರ ತಾಲೂಕಿನ ಸಾಲೂರು ಬೃಹನ್ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಮೆಟ್ಟೂರು ಶಾಸಕ ಸದಾಶಿವಂ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
    ನಂತರ ಮಾತನಾಡಿದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕಳೆದ ವರ್ಷ ಮಳೆಯಿಲ್ಲದ ಪರಿಣಾಮ ಕಾವೇರಿ ಒಡಲು ಬರಿದಾಗಿತ್ತು. ಈ ವರ್ಷ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದು, ಕಬಿನಿ ಹಾಗೂ ಕೆಆರ್‌ಎಸ್ ಡ್ಯಾಂ ಭರ್ತಿಯಾಗಿದೆ. ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಕಾವೇರಿ ಮಾತೆ ನಾಡಿಗೆ ಸಮೃದ್ಧಿಯನ್ನು ಉಂಟು ಮಾಡಲಿ ಎಂದು ಆಶಿಸಿದರು. ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ ರಘು, ರವೀಂದ್ರ, ಸೆಲ್ವಂ ಇತರರು ಇದ್ದರು.