ಜಿಲ್ಲೆ

ಮಡಿಕೇರಿಯಲ್ಲಿ ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ವಿತರಣೆ

ಮಡಿಕೇರಿ:

ಕೊಡಗಿನಲ್ಲಿ ಕಳೆದ ೨೫ ವರ್ಷಗಳಿಂದ ಬಿಜೆಪಿಯನ್ನು ಸಹಿಸಿದ್ದು ಸಾಕು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್. ಚಂದ್ರಮೌಳಿ ಕರೆ ನೀಡಿದರು. ನಗರದ ವಿವಿಧೆಡೆ ವಿವಿಧ ಭರವಸೆಗಳ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆಯ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ವಿನೂತನ ಯೋಜನೆಗಳ ಮೂಲಕ ಬಡವರ ಹಾಗೂ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ಕಾಂಗ್ರೆಸ್ ಮಾಡಲಿದೆ ಎಂದರು.


ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ೬೦೦ ಭರವಸೆಗಳಲ್ಲಿ ೫೮೯ ನ್ನು ಈಡೇರಿಸಿದೆ. ಈ ಬಾರಿಯೂ ಕಾಂಗ್ರೆಸ್ ಗೆ ಅವಕಾಶ ನೀಡಿದರೆ ಎಲ್ಲಾ ಭರವಸೆಗಳನ್ನು ಪೂರೈಸಲಾಗುವುದು. ಕೊಡಗಿನ ಜನ ಕಾಂಗ್ರೆಸ್ ಪರ ಒಲವು ತೋರುತ್ತಿದ್ದು, ಎರಡೂ ಕ್ಷೇತ್ರಗಳಲ್ಲಿ ಗೆಲುವು ಖಚಿತವಾಗಿದೆ ಎಂದರು.


ಗ್ಯಾರಂಟಿ ಕಾರ್ಡ್ ಅಭಿಯಾನದ ನೇತೃತ್ವ ವಹಿಸಿದ್ದ ಕಾಂಗ್ರೆಸ್ ನಗರಾಧ್ಯಕ್ಷ ಬಿ.ವೈ.ರಾಜೇಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಮಾಜಿ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್ ಹಾಗೂ ವಕ್ತಾರ ತೆನ್ನಿರ ಮೈನಾ ಮಾತನಾಡಿದರು.


ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಮುಖರಾದ ಟಿ.ಎಂ.ಅಯ್ಯಪ್ಪ, ಕಾವೇರಮ್ಮ ಸೋಮಣ್ಣ, ಚುಮ್ಮಿ ದೇವಯ್ಯ, ಮಹಿಳಾ ಘಟಕದ ಅಧ್ಯಕ್ಷೆ ಸುರಯ್ಯ ಅಬ್ರಾರ್, ಜಪ್ರುಲ್ಲ, ಮಿನಾಜ್ ಪ್ರವೀಣ್, ಫ್ಯಾನ್ಸಿ ಬೆಳ್ಯಪ್ಪ, ಪ್ರೇಮ ಕೃ?್ಣಪ್ಪ ಪ್ರಕಾಶ್ ಆಚಾರ್ಯ, ಸ್ವರ್ಣಲತಾ, ಮುಮ್ತಾಜ್ ಬೇಗ್, ನಗರ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಆರ್.ಪಿ ಮತ್ತಿತರರು ಇದ್ದರು.