ಜಿಲ್ಲೆ

ಮತ ಎಣಿಕೆ: ಅಭ್ಯರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ

ಹಾಸನ: ಲೋಕಸಭಾ ಚುನಾವಣೆಯ ಮತ ಎಣಿಕೆ ಜೂನ್ 4ರಂದು ನಡೆಯಲಿದ್ದು, ಈ ಹಿನ್ನಲೆಯಲ್ಲಿ ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಭ್ಯರ್ಥಿಗಳೊಂದಿಗೆ ಸಭೆ ನಡೆಯಿತು.
ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಅವರು ಮಾತನಾಡಿ, ಮತ ಎಣಿಕೆ ಕೇಂದ್ರಕ್ಕೆ ಅಭ್ಯರ್ಥಿಗಳು, ಗುರುತಿನ ಚೀಟಿ ಹೊಂದಿರುವ ಏಜೆಂಟರಿಗೆ ಮಾತ್ರ ಪ್ರವೇಶ ನೀಡಲಾಗುವುದು. ಮೊಬೈಲ್, ಸ್ಮಾರ್ಟ್ ವಾಚ್ ಸೇರಿದಂತೆ ಡಿಜಿಟಲ್ ಸಾಧನಗಳನ್ನು ಕಡ್ಡಾಯವಾಗಿ ಎಣಿಕೆ ಕೇಂದ್ರದ ಒಳಗೆ ನಿರ್ಬಂಧಿಸಲಾಗಿದೆ. ಅಭ್ಯರ್ಥಿಗಳ ಏಜೆಂಟರು ನಿಗದಿತ ನಿಗದಿತ ಕೊಠಡಿ ಬಿಟ್ಟು ಬೇರೆಡೆಗೆ ತೆರಳುವಂತಿಲ್ಲ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಮಾತನಾಡಿ, ವಿಜಯೋತ್ಸವ ನಡೆಸಲು ಅವಕಾಶವಿಲ್ಲ. ಮತ ಎಣಿಕೆ ಕೇಂದ್ರದ ವ್ಯಾಪ್ತಿಯಲ್ಲಿ ಪಾರ್ಕಿಂಗ್‌ಗೆ ನಿಗದಿತ ಸ್ಥಳ ವ್ಯವಸ್ಥೆ ಮಾಡಲಾಗಿದೆ. ಗುರುತಿನ ಚೀಟಿ ದುರುಪಯೋಗ ಕಂಡು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಸೇರಿದಂತೆ ಅಭ್ಯರ್ಥಿಗಳು ಮತ್ತು ವಿವಿಧ ಪಕ್ಷದ ಮುಖಂಡರು ಇತರರು ಇದ್ದರು.