ಜಿಲ್ಲೆ

ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

ಬಳ್ಳಾರಿ : ಇಲ್ಲಿನ ಆರ್‌ವೈಎಂಸಿ ಕಾಲೇಜಿನ ಲೋಕಸಭಾ ಚುನಾವಣೆಯ ಮತ ಎಣಿಕೆ ಕೇಂದ್ರಕ್ಕೆ ಡಿಸಿ ಪ್ರಶಾಂತ ಕುಮಾರ ಮಿಶ್ರಾ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.
ಮತ ಎಣಿಕಾ ಕೊಠಡಿಗಳಲ್ಲಿ ಅಗತ್ಯ ಬ್ಯಾರಿಕೇಡ್, ಎಣಿಕಾ ಟೇಬಲ್ಗಳ ವ್ಯವಸ್ಥೆ, ಮತ ಎಣಿಕಾ ಕೇಂದ್ರಕ್ಕೆ ಪ್ರವೇಶ ಕಲ್ಪಿಸುವ ದ್ವಾರದಲ್ಲಿ ಭದ್ರತೆ ಮುಂತಾದ ಕಾರ್ಯಗಳ ಬಗ್ಗೆಯೂ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಡಿಸಿ ಪ್ರಶಾಂತ ಕುಮಾರ ಮಿಶ್ರಾ ಮಾತನಾಡಿ, ಮತಗಳ ಎಣಿಕಾ ಕಾರ್ಯ ಅತ್ಯಂತ ಸುಗಮ ಹಾಗೂ ಸುವ್ಯವಸ್ಥೆಯಿಂದ ಜರುಗಬೇಕು. ಎಣಿಕಾ ಕೇಂದ್ರ ಕಟ್ಟಡದಲ್ಲಿ ಅಂದು ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿ, ಸಿಬ್ಬಂದಿ, ಮಾಧ್ಯಮದವರು ಸೇರುವುದರಿಂದ ಉಪಹಾರ ಹಾಗೂ ಊಟದ ವ್ಯವಸ್ಥೆ ಅಚ್ಚುಕಟ್ಟಾಗಿರಬೇಕು. ಕಟ್ಟಡದ ಪ್ರತಿ ಮಹಡಿಯಲ್ಲಿರುವ ಶೌಚಾಲಯಗಳನ್ನು ಸ್ವಚ್ಛವಾಗಿರಿಸಿ, ನಿಯಮಿತವಾಗಿ ಸ್ವಚ್ಛತೆಯ ನಿರ್ವಹಣೆಗೆ ಸ್ವಚ್ಛತಾ ಸಿಬ್ಬಂದಿ ನಿಯೋಜಿಸಬೇಕು. ಎಣಿಕಾ ಕೇಂದ್ರ ಪ್ರವೇಶಿಸಲು ಅಧಿಕೃತವಾಗಿ ಪಡೆದಿರುವ ಪ್ರವೇಶ ಅನುಮತಿ ಪತ್ರ ಹೊಂದಿದವರಿಗೆ ಮಾತ್ರ ಎಣಿಕಾ ಕೇಂದ್ರಕ್ಕೆ ಪ್ರವೇಶಿಸಲು ಅವಕಾಶ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.