ಮೈಸೂರು:ಮತದಾರರನ್ನು ಸೆಳೆಯುವ ಉದ್ದೇಶದಿಂದ ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ‘ನಮ್ಮ ನಡೆ ಮತಗಟ್ಟೆ ಕಡೆ’ ಕಾರ್ಯಕ್ರಮದಡಿ ಮತದಾನ ಬಾವುಟದ ಧ್ವಜಾರೋಹಣ ನೆರವೇರಿಸಲಾಯಿತು.
ಚುನಾವಣಾಧಿಕಾರಿ ಕೃಷ್ಣಮೂರ್ತಿ ಮತದಾನ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ಕೋರಿದರು.
ಇದೇ ವೇಳೆ ವೀರಭದ್ರ ಕುಣಿತ ಕಲಾವಿದರು ಮೇ 10ರಂದು ತಪ್ಪದೆ ಮತದಾನ ಮಾಡುವಂತೆ ಜಾಗೃತಿ ಮೂಡಿಸಿ ಎಲ್ಲರ ಗಮನ ಸೆಳೆದರು. ತಹಸೀಲ್ದಾರ್ ಶಿವಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ್ ನೇತೃತ್ವದಲ್ಲಿ ಕಾಲ್ನಡಿಗೆ ಮತದಾನ ಜಾಗೃತಿ ಜಾಥಾ ನಡೆಯಿತು. ಬಳಿಕ ಕಾಲೇಜು ಆವರಣದಲ್ಲಿ ಸಂಗೀತ ಕಾರ್ಯಕ್ರಮ ಏರ್ಪಡಿಸಿದ್ದು, ಜಾನಪದ ಹಾಗೂ ಭಾವಗೀತೆ ಗಾಯನ ಆಯೋಜಿಸಲಾಗಿತ್ತು.