ಜಿಲ್ಲೆ

ಮತದಾನ ಪ್ರಾತ್ಯಕ್ಷಿಕೆ ಕೇಂದ್ರ ವೀಕ್ಷಿಸಿದ ಸಿಇಓ, ಎಸ್‍ಪಿ

ಬಾಗಲಕೋಟೆ: ಬರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಜಾಗೃತಿ ಕಾರ್ಯಕ್ರಮ ನಿಮಿತ್ಯ ಜಿಲ್ಲಾಡಳಿತ ಭವನದಲ್ಲಿ ಸ್ಥಾಪಿಸಿರುವ ವಿದ್ಯುನ್ಮಾನ ಮತದಾನ ಪ್ರಾತ್ಯಕ್ಷಿಕೆ ಕೇಂದ್ರಕ್ಕೆ ಜಿ.ಪಂ ಸಿಇಓ ಶಶಿಧರ ಕುರೇರ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಭೇಟಿ ನೀಡಿ ವೀಕ್ಷಣೆ ಮಾಡಿದರು.

ಮತದಾರರಿಗೆ ವಿದ್ಯುನ್ಮಾನ ಮತ ಯಂತ್ರಗಳ ಹಾಗೂ ಮತದಾನ ಕುರಿತು ಅರಿವು ಮೂಡಿಸಲು ಪ್ರಾತ್ಯಕ್ಷಿಕೆ ಕೇಂದ್ರ ಸ್ಥಾಪಿಸಲಾಗಿದೆ. ಮತದಾರರು ಹಾಗೂ ಯುವ ಮತದಾರರು ಇದರ ಪ್ರಯೋಜ ಪಡೆದುಕೊಳ್ಳಬೇಕು. ಇವಿಎಂಗಳು ಸತ್ಯದ ಕನ್ನಡಿ ಇದ್ದ ಹಾಗೆ. ಯಾವುದೇ ರೀತಿಯಲ್ಲಿ ತಿರುಚಲು ಸಾಧ್ಯವಿಲ್ಲ. ಮತದಾರರು ತಾವು ಹಾಕಿದ ಮತವನ್ನು ಖಾತರಿ ಪಡಿಸಿಕೊಳ್ಳಬಹುದಾಗಿದೆ ಎಂದು ಜಿ.ಪಂ ಸಿಇಓ ಶಶಿಧರ ಕುರೇರ ಹೇಳಿದರು.