ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಮತದಾರರಿಗೆ ಆಮಿಷ ಒಡ್ಡುವ ಕಾರ್ಯವನ್ನು ರಾಜಕಾರಣಿಗಳು ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಚುನಾವಣಾ ಆಯೋಗ ಹಾಗೂ ಜಿಲ್ಲಾಡಳಿತ ಕ್ರಮ ವಹಿಸಬೇಕು ಎಂದು ಒತ್ತಾಯಿಸಿ ಕೆಆರ್‌ಎಸ್ ಪಕ್ಷದಿಂದ ಪ್ರತಿಭಟನೆ ನಡೆಯಿತು.
ಮತದಾರರನ್ನು ಸೆಳೆಯಲು ಹಲವಾರು ಆಮಿಷಗಳನ್ನು ಒಡ್ಡಲಾಗುತ್ತದೆ. ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ಅರ್ಹ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣ ರೆಡ್ಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖರಾದ ಆದರ್ಶ್ ಅರಸ್, ವಿಜಯ ಕುಮಾರ್, ಭಾನು ಮೋಹನ್, ತಿಮ್ಮ ಭೋವಿ ಹಾಗೂ ಇತರರು ಪಾಲ್ಗೊಂಡಿದ್ದರು