ಅರಸೀಕೆರೆ ತಾಲೂಕಿನ ಚಿಂದೇನಹಳ್ಳಿ ಗಡಿ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಭೂಮಿ ಪೂಜೆ ನೆರವೇರಿಸಿದರು. ಚಂದ್ರಶೇಖರ್, ಅಶೋಕ್, ಗಂಗಾಧರ್, ಕೇಶವಮೂರ್ತಿ, ಪುಟ್ಟಸ್ವಾಮಿ ಇತರರಿದ್ದಾರೆ. 
ಜಿಲ್ಲೆ

ಮತದಾರರು ಜೆಡಿಎಸ್ ಕೊಡುಗೆ ಮರೆಯುವುದಿಲ್ಲ

ಅರಸೀಕೆರೆ: ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಜೆಡಿಎಸ್ ನೀಡಿರುವ ಕೊಡುಗೆಯನ್ನು ಮತದಾರರು ಎಂದಿಗೂ ಮರೆಯುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಹೇಳಿದರು.

ತಾಲೂಕಿನ ಗಂಡಸಿ ಹೋಬಳಿ ಚಿಂದೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಸಿಸಿ ರಸ್ತೆ, ಚರಂಡಿ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ತೆಂಗು ಬೆಳೆ ಕಳೆದುಕೊಂಡ ರೈತರಿಗೆ ಪರಿಹಾರ ನೀಡುವ ಮೂಲಕ ನೆರವಿಗೆ ಧಾವಿಸಿದ್ದಾರೆ. ಸಾಲಮನ್ನಾ ಯೋಜನೆ ಎಲ್ಲ ವರ್ಗದ ರೈತರಿಗೆ ಅನುಕೂಲವಾಗಿದೆ. ನಗರ ಹಾಗೂ ಗ್ರಾಮೀಣ ಭಾಗದ ಸಮಗ್ರ ಅಭಿವೃದ್ಧಿಗೆ ಅನುದಾನದ ಮಹಾಪೂರವನ್ನೇ ಹರಿಸಿದ್ದಾರೆ. ಬಡ ಹಾಗೂ ಮಧ್ಯಮ ವರ್ಗದ ರೈತಾಪಿ ಮಕ್ಕಳ ಶೈಕ್ಷಣಿಕ ಹಿತ ಮನಗಂಡು ಇಂಜಿನಿಯರಿಂಗ್ ಕಾಲೇಜು ಮಾಡಿಕೊಟ್ಟಿರುವುದು ಸಾಧನೆಯಲ್ಲವೆ? ಇಂತಹ ಜನೋಪಯೋಗಿ ಕೆಲಸಗಳು ಚುನಾವಣೆಯಲ್ಲಿ ಜೆಡಿಎಸ್ ನೆರವಿಗೆ ಬರಲಿವೆ ಎಂದು ವಿಶ್ವಾಸವ್ಯಕ್ತಪಡಿಸಿದರು.

ತಾಲೂಕು ಜೆಡಿಎಸ್ ಅಧ್ಯಕ್ಷ ಕೆ.ಎಸ್. ಚಂದ್ರಶೇಖರ್, ಜೆಡಿಎಸ್ ಅಭ್ಯರ್ಥಿ ಬಾಣಾವರ ಅಶೋಕ್, ತಾಪಂ ಮಾಜಿ ಸದಸ್ಯ ಹೊಸೂರು ಗಂಗಾಧರ್, ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಪುಟ್ಟಸ್ವಾಮಿ, ಮುಖಂಡರಾದ ಕೆಂಕೆರೆ ಕೇಶವಮೂರ್ತಿ, ಯಡವನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಕೆಂಪರಾಜ್, ಪ್ರಶಾಂತ್,ಅರುಣ್ ಕುಮಾರ್ ಸೇರಿ ಹಲವರು ಸಾಥ್ ನೀಡಿದರು.