ಶನಿವಾರಸಂತೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಬಿ.ಸಿ.ಟ್ರಸ್ಟ್, ಜನಜಾಗೃತಿ ವೇದಿಕೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಇಲ್ಲಿನ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ ಮದ್ಯವರ್ಜನ ಶಿಬಿರದಲ್ಲಿ ಸೋಮವಾರಪೇಟೆ ತಾಲೂಕಿನ ವಿವಿಧ ಕಡೆಯಿಂದ ಆಗಮಿಸಿದ್ದ 50 ಮದ್ಯವ್ಯಸನಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು.
ಶಿಬಿರವು ಜು.19 ರವರೆಗೆ ನಡೆಯಲಿದ್ದು, ಶಿಬಿರಾರ್ಥಿಗಳಿಗೆ ಪ್ರತಿ ದಿನ ಬೆಳಗ್ಗೆ 11ರಿಂದ 12 ಗಂಟೆವರೆಗೆ ನವಜೀವನ ಸಮಿತಿ ಸದಸ್ಯರು ಹಲವು ಸಲಹೆ ನೀಡಲಿದ್ದಾರೆ. ಮಧ್ಯಾಹ್ನ 12ರಿಂದ 1 ಗಂಟೆವರೆಗೆ ಸಂಪನ್ಮೂಲ ವ್ಯಕ್ತಿಗಳಿಂದ ಗುಂಪು ಮತ್ತು ಕೌಟುಂಬಿಕ ಸಲಹೆ ಮಧ್ಯಾಹ್ನ 2.30 ರಿಂದ 4 ಗಂಟೆ ವರೆಗೆ ಮಾಹಿತಿ ಮಾರ್ಗದರ್ಶನ ಕಾರ್ಯಕ್ರಮ, ಸಂಜೆ 4 ರಿಂದ 5.30 ರವರೆಗೆ ಶಿಬಿರಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 7 ರಿಂದ 8 ಗಂಟೆವರೆಗೆ ಶಿಬಿರಾರ್ಥಿಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
ಪತ್ರಿ ದಿನ ಬೆಳಗ್ಗೆ ಯೋಗ, ಧ್ಯಾನ ಹೇಳಿಕೊಡಲಾಗುತ್ತದೆ. ಶನಿವಾರಸಂತೆ ಯೋಗ ಶಿಕ್ಷಕ ಎ.ಡಿ.ಮೋಹನ್‌ಕುಮಾರ್ ಇದರ ನೇತೃತ್ವ ವಹಿಸಿದ್ದಾರೆ.