ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ಎಸ್.ಮಧುಸೂದನ್ ಕರಾಟೆಯಲ್ಲಿ ಚಿನ್ನದ ಪದಕ ಪಡೆದಿರುವುದು. 
ಜಿಲ್ಲೆ

ಮಧುಸೂದನ್‌ಗೆ ಚಿನ್ನದ ಪದಕ

ಯಳಂದೂರು: ತಾಲೂಕಿನ ಬಿಳಿಗಿರಿರಂಗನಬೆಟ್ಟದ ನಿವಾಸಿ ಸ್ನೇಕ್ ಸುಂದರ್ ಎಂಬುವರ ಪುತ್ರ ಎಸ್. ಮಧುಸೂದನ್ ಜೋಗಿಗೆ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಲಭಿಸಿದೆ.

ಇತ್ತೀಚೆಗೆ ಬೆಂಗಳೂರಿನ ಎಚ್‌ಎಂಟಿ ಸ್ಫೋರ್ಟ್ಸ್ ಕ್ಲಬ್‌ನಲ್ಲಿ ರೆಕ್-ಕ್ಯೂ-ಶಿನ್-ಕೈ ಮಾರ್ಷಲ್ ಆರ್ಟ್ಸ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.