ಜಿಲ್ಲೆ

ಮನಪಾ ಅಧಿಕಾರಿ ಮನೆಗೆ ಎಸಿಬಿ ದಾಳಿ

reportermng

ಮಂಗಳೂರು: ಮಹಾನಗರಪಾಲಿಕೆ ನಗರ ಯೋಜನೆ ಜಂಟಿ ನಿರ್ದೇಶಕ ಜಯರಾಜ್ ಮನೆ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಳೆದ ಆರು ವರ್ಷಗಳಿಂದ ಮಹಾನಗರಪಾಲಿಕೆಯಲ್ಲಿ ಕರ್ತವ್ಯದಲ್ಲಿರುವ ಜಯರಾಜ್ ವಿರುದ್ದ ಅಕ್ರಮ ಆಸ್ತಿ ಸಂಪಾದನೆ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ಎಸಿಬಿ ಅಧಿಕಾರಿಗಳು ಬಿಜೈ ಕಾಪಿಕಾಡ್ ನಲ್ಲಿರುವ ಮನೆ ಹಾಗೂ ಪಾಲಿಕೆ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

ಇವರ ಪತ್ನಿ ಕೇರಳದಲ್ಲಿದ್ದು, ಅಲ್ಲಿನ ಮನೆಗೂ ದಾಳಿ ನಡೆಸಿ ಅಕ್ರಮ ಆಸ್ತಿ ಸಂಪಾದನೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲಾಗುತ್ತದೆ. ಎಸಿಬಿ ಎಸ್ಪಿ ಭೋಪಯ್ಯ, ಡಿವೈಎಸ್ಪಿ ಕೆ.ಸಿ.ಪ್ರಕಾಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.