ಜಿಲ್ಲೆ

ಮನೆ ಬೀಗ ಮುರಿದು ಚಿನ್ನಾಭರಣ ಕಳವು

ರಾಜಣ್ಣ

ಹನೂರು: ತಾಲೂಕಿನ ಕೌದಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ಮನೆಯೊಂದರ ಬಾಗಿಲು ಬೀಗ ಮುರಿದು ಒಳನುಗ್ಗಿರುವ ಕಳ್ಳರು ಬೀರುವಿನಲ್ಲಿದ್ದ 1.80 ಲಕ್ಷ ರೂ. ನಗದು ಹಾಗೂ 26 ಗ್ರಾಂ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದಾರೆ.

ಗ್ರಾಮದ ಮಹಮದ್ ಹರ್ಷದ್ ಅವರು ಕಳೆದ 2 ದಿನದ ಹಿಂದೆ ಬಾಗಿಲಿಗೆ ಬೀಗ ಹಾಕಿಕೊಂಡು ಕುಟುಂಬಸ್ಥರೊಂದಿಗೆ ನಾಗೂರು ದೇಗುಲಕ್ಕೆ ತೆರಳಿದ್ದರು. ಗುರುವಾರ ಬೆಳಗ್ಗೆ ಮನೆಗೆ ಆಗಮಿಸಿದ ಅವರು ಬಾಗಿಲಿನ ಬೀಗ ಮುರಿದಿರುವುದು ಕಂಡು ಮನೆಯೊಳಗೆ ತೆರಳಿ ವೀಕ್ಷಿಸಿದಾಗ ಕಳ್ಳರು ಬೀರುವಿನ ಲಾಕರ್ ಮುರಿದು 1.80 ಲಕ್ಷ ರೂ.ನಗದು ಹಾಗೂ 26 ಗ್ರಾಂ ಕಳ್ಳತನ ಮಾಡಿರುವುದು ಗಮನಕ್ಕೆ ಬಂತು. ಕೂಡಲೇ ಮಹಮದ್ ಹರ್ಷದ್ ಅವರು ಪೊಲೀಸರಿಗೆ ಮಾಹಿತಿ ತಿಳಿಸಿದರು.

ಸ್ಥಳಕ್ಕಾಗಮಿಸಿದ ಇನ್ಸ್‌ಪೆಕ್ಟರ್ ಶೇಷಾದ್ರಿ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.