ಜಿಲ್ಲೆ

ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ

ಗೋಣಿಕೊಪ್ಪಲು: ಸಾರ್ವಜನಿಕರ ಸಮಸ್ಯೆ, ದೂರು ಆಲಿಸಲು ಪೊಲೀಸ್ ಸಿಬ್ಬಂದಿಯೇ ಮನೆ ಬಾಗಿಲಿಗೆ ಬರುವಂತಹ ವಿನೂತನ ಪರಿಕಲ್ಪನೆಯಾದ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಭಾನುವಾರ ಗೋಣಿಕೊಪ್ಪದಲ್ಲಿ ಚಾಲನೆ ನೀಡಲಾಯಿತು.

ಗೋಣಿಕೊಪ್ಪ ಠಾಣಾಧಿಕಾರಿ ಬಿ.ಕೆ.ಪ್ರದೀಪ್‌ಕುಮಾರ್

ಮತ್ತು ಸಿಬ್ಬಂದಿ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ವಿಭಾಗದ ಉಮಾಮಹೇಶ್ವರಿ ಬಡಾವಣಿಗೆ ತೆರಳಿ ಪೊಲೀಸರ ಜನಸ್ನೇಹಿ ಕಾರ್ಯಕ್ರಮವಾಗಿರುವ ಮನೆ ಬಾಗಿಲಿಗೆ ಪೊಲೀಸರು ಈ ವಿಚಾರವಾಗಿ ಜನರಲ್ಲಿ ಜಾಗೃತಿ ಮೂಡಿಸಿದರು.

ಮನೆ ಮನೆಗೆ ಪೊಲೀಸ್ ಎಂಬ ರಾಜ್ಯ ಸರ್ಕಾರದ ವಿನೂತನ ಪರಿಕಲ್ಪನೆಯ ಕಾರ್ಯಕ್ರಮವಾಗಿದೆ. ಪೊಲೀಸರಿಂದ ಹೆಚ್ಚಿನ ಸೇವೆ ಈ ಮೂಲಕ ಜನರೆಡೆಗೆ ತಲುಪಲಿದೆ ಎಂದು ಹೇಳಿದರು.

ನಂತರ ಕಾರ್ಯಕ್ರಮದ ಭಾಗವಾಗಿ ಪೊಲೀಸ್ ಸಿಬ್ಬಂದಿ ಎಂಟು ವಾರ್ಡ್‌ಗಳಲ್ಲಿ ಅಭಿಯಾನ ಕೈಗೊಂಡು, ಸೈಬರ್ ಅಪರಾಧ, ಮಾದಕ ವಸ್ತು, ಬಾಲಾಪರಾಧ, ಪೋಕ್ಸೋ ಕಾಯ್ದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಿದರು.

ಮನೆಯಲ್ಲಿರುವವರ ಹೆಸರು, ಮೊಬೈಲ್ ನಂಬರ್ ಪಡೆದುಕೊಳ್ಳಲಾಯಿತು.

ಗೋಣಿಕೊಪ್ಪ ಠಾಣಾಧಿಕಾರಿ ಪ್ರದೀಪ್‌ಕುಮಾರ್, ಪ್ರೊಬೇಷನರಿ ಪಿಎಸ್ಸೈ ಸಿ.ಕಾಳಿಂಗಪ್ಪ, ಎಎಸ್ಸೈಗಳಾದ ಶ್ರೀನಿವಾಸ್, ವೆಂಕಟೇಶ್ ಹಾಗೂ ಪೊಲೀಸ್ ಸಿಬ್ಬಂದಿ ಅಭಿಯಾನವನ್ನು ಮುನ್ನಡೆಸಿದರು.