ಜಿಲ್ಲೆ

ಮನೆ ಮೇಲೆ ಗುಂಡಿನ ದಾಳಿ

ಗೋಣಿಕೊಪ್ಪ: ಪೊನ್ನಂಪೇಟೆ ತಾಲೂಕು ಬಲ್ಯಮುಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡ್ಚೆ ಗ್ರಾಮದಲ್ಲಿ ಮನೆಯೊಂದರ ಮೇಲೆ ಗುಂಡಿನ ದಾಳಿ ನಡೆದಿದೆ.


ಶುಕ್ರವಾರ ಮುಂಜಾನೆ ಗ್ರಾಮದ ರೈತರಾದ ಎಂ.ಡಿ.ಮಾಚಯ್ಯ ಎಂಬುವರ ಮನೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು ಮನೆಯ ಕಿಟಕಿಗೆ ಎರಡು ಗುಂಡುಗಳು ತಗುಲಿವೆ. ಮನೆಯಲ್ಲಿ ವಾಸವಿದ್ದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ.


ಸುದ್ದಿ ತಿಳಿದ ಕುಟ್ಟ ವೃತ್ತ ನಿರೀಕ್ಷಕ ಮಂಜಪ್ಪ, ಶ್ರೀಮಂಗಲ ಠಾಣಾಧಿಕಾರಿ ಶಿವಾನಂದ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳು ಮನೆಯ ಅನತಿ ದೂರದಿಂದ ಗುಂಡಿನ ದಾಳಿ ನಡೆಸಿರುವ ಬಗ್ಗೆ ಮೇಲ್ನೊಟಕ್ಕೆ ತಿಳಿದುಬಂದಿದೆ. ಗುಂಡಿನ ದಾಳಿ ನಡೆಸಿರುವ ಬಗ್ಗೆ ಕಾರಣ ತಿಳಿದುಬಂದಿಲ್ಲ. ಕುಟ್ಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.