ಜಿಲ್ಲೆ

ಮನೆಗೆ ಬೆಂಕಿ ಬಿದ್ದು ಗೃಹೋಪಯೋಗಿ ವಸ್ತುಗಳು ಭಸ್ಮ

ಪಿರಿಯಾಪಟ್ಟಣ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ತಾಲೂಕಿನ ತಾತನಹಳ್ಳಿ ಗ್ರಾಮದ ಮೊಬಿನ್ ತಾಜ್ ಅಕ್ಮಲ್ ಎಂಬುವರ ಮನೆಯಲ್ಲಿ ಬುಧವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದರಿಂದ ಏಕಾಏಕಿ ಮನೆಯೊಳಗೆ ಬೆಂಕಿ ಆವರಿಸಿಕೊಂಡಿದ್ದು, ಮನೆಯಲ್ಲಿದ್ದ ಟಿವಿ, ಫ್ರಿಡ್ಜ್, ವಾಷಿಂಗ್ ಮಷೀನ್ ಸೇರಿದಂತೆ ಹಲವು ಬಗೆಯ ಗೃಹೋಪಯೋಗಿ ವಸ್ತುಗಳು ಹಾಗೂ ಬಟ್ಟೆ, ಪಾತ್ರೆ, ಪಡಿತರ ಪದಾರ್ಥಗಳು ಸೇರಿದಂತೆ ಎಲ್ಲವೂ ಸುಟ್ಟು ಹೋಗಿವೆ. ಅದೃಷ್ಟವಶಾಂತ್ ಆ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದಿದ್ದರಿಂದ ಯಾವುದೇ ರೀತಿಯ ಪ್ರಾಣಪಾಯಗಳು ಸಂಭವಿಸಿಲ್ಲ.

ಸುದ್ದಿ ತಿಳಿದ ತಕ್ಷಣ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾಗಿದೆ. ಆ ವೇಳೆಗೆ ಮನೆಯಲ್ಲಿದ್ದ ಬಹುತೇಕ ಪದಾರ್ಥಗಳು ಬೆಂಕಿಗೆ ಆಹುತಿಯಾಗಿದ್ದು ಅಪಾರ ನಷ್ಟ ಸಂಭವಿಸಿದೆ.

ಮಾಜಿ ಶಾಸಕ ಕೆ.ಮಹದೇವ್, ಪುರಸಭಾ ಸದಸ್ಯ ಪಿ.ಸಿ.ಕೃಷ್ಣ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕೂಡಲೇ ಸರ್ಕಾರದಿಂದ ಪರಿಹಾರ ನೀಡಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.