ಜಿಲ್ಲೆ

ಮನೆಯ ಗೋಡೆ ಕುಸಿದು ಯುವಕ ಸಾವು

ಸಿದ್ದಾಪುರ(ಉತ್ತರ ಕನ್ನಡ:) ಭಾರಿ ಮಳೆಯಿಂದ ಮನೆಯ ಗೋಡೆ ಕುಸಿದು ಯುವಕನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಕ್ಯಾದಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ನಾರಾಯಣ ಹಸ್ಲರ್ ಅವರ ಮನೆಯ ಗೋಡೆ ಕುಸಿದಿದ್ದು, ಮಗ ಚಂದ್ರಶೇಖರ ನಾರಾಯಣ ಹಸ್ಲರ್ (21) ಮಣ್ಣಿನಡಿ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಸಿದ್ದಾಪುರ ಸರ್ಕಾರಿ ಆಸ್ಪತ್ರೆ, ನಂತರ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗಿತ್ತು.

ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗುವ ಮಾರ್ಗದಲ್ಲಿ ಬೆಳಗಿನಜಾವ ಸುಮಾರು 03:30 ಕ್ಕೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ತಹಸೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.