ಹನೂರು: ತಾಲೂಕಿನ ಮಣಗಳ್ಳಿ ಗ್ರಾಮದ ಮನೆಯೊಂದರಲ್ಲಿ ಶನಿವಾರ ಕಾಣಿಸಿಕೊಂಡ ನಾಗರಹಾವನ್ನು ಅಜ್ಜೀಪುರದ ಸ್ನೇಕ್ ಮಧು ಸುರಕ್ಷಿತವಾಗಿ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಟ್ಟರು.
ಗ್ರಾಮದ ವೆಂಕಟರಾಮ ಶೆಟ್ಟಿ ಅವರ ಮನೆಯಲ್ಲಿ ಮಧ್ಯಾಹ್ನ 2ರ ವೇಳೆಯಲ್ಲಿ ಸುಮಾರು 6 ಅಡಿ ಉದ್ದದ ನಾಗರಹಾವು ಕಾಣಿಸಿಕೊಂಡಿದೆ. ಇದರಿಂದ ಗಾಬರಿಗೊಂಡ ಕುಟುಂಬಸ್ಥರು ಸ್ನೇಕ್ ಮಧುಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅವರು ಕಾರ್ಯಾಚರಣೆ ನಡೆಸಿ ಹಾವನ್ನು ಸುರಕ್ಷಿತವಾಗಿ ಹಿಡಿದು ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಅರಣ್ಯ ಪ್ರದೇಶಕ್ಕೆ ಬಿಟ್ಟರು.