ಜಿಲ್ಲೆ

ಮನೆಯಿಂದ ಮತದಾನ ಇಂದು ಆರಂಭ

ಚಿತ್ರದುರ್ಗ: ಲೋಕಸಭಾ ಚುನಾವಣೆಗೆ ಅಂಗವಿಕಲರು ಹಾಗೂ 85 ವರ್ಷ ವಯಸ್ಸು ಮೀರಿದ ಹಿರಿಯ ನಾಗರಿಕರಿಗೆ ಏ.13ರಿಂದ 15ರ ವರೆಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಮಾಡಿಕೊಟ್ಟಿದೆ.
ಈ ಹಿನ್ನೆಲೆಯಲ್ಲಿ ಮನೆಯಿಂದಲೇ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಧಿಕಾರಿ, ಸಿಬ್ಬಂದಿಗೆ ಸಹಾಯಕ ಚುನಾವಣಾಧಿಕಾರಿ ನೇತೃತ್ವದಲ್ಲಿ ನಗರಸಭೆಯಲ್ಲಿ ಶುಕ್ರವಾರ ತರಬೇತಿ ನೀಡಲಾಯಿತು.
ಸಹಾಯಕ ಚುನಾವಣಾಧಿಕಾರಿ ಎಂ.ಕಾರ್ತಿಕ್, ತಹಸೀಲ್ದಾರ್ ಡಾ.ನಾಗವೇಣಿ, ನಗರಸಭೆ ಆಯುಕ್ತೆ ಎಂ.ರೇಣುಕಾ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ಮತ್ತಿತರ ಅಧಿಕಾರಿಗಳಿದ್ದರು.