ಹೂವಿನಹಡಗಲಿ: ತಾಲೂಕಿನಲ್ಲಿ ಮಂಗಳವಾರ ಉತ್ತಮ ಮಳೆಯಾಯಿತು. ಮಧ್ಯಾಹ್ನದಿಂದ ಸಂಜೆವರೆಗೆ ಸುರಿದ ಮಳೆಯಿಂದಾಗಿ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿತ್ತು. ರಸ್ತೆಗಳ ಮೇಲೆ ಮಳೆ ನೀರು ಹರಿಯಿತು.
ಜಮೀನುಗಳು ಜಲಾವೃತವಾಗಿದ್ದು, ಹಳ್ಳಗಳು ತುಂಬಿ ಹರಿದವು. ಉತ್ತಂಗಿ ಸಮೀಪ ಚಳ್ಳಕೆರೆ-ಅರಭಾವಿ ರಾಜ್ಯ ಹೆದ್ದಾರಿಯಲ್ಲಿ ಮರ ಬಿದ್ದ ಪರಿಣಾಮ ಸಂಚಾರದಲ್ಲಿ ವ್ಯತ್ಯಯವಾಗಿ ವಾಹನ ಸವಾರರು ಪರದಾಡಿದರು.