ವಿಜಯವಾಣಿ ಸುದ್ದಿಜಾಲ, ಮುದ್ದೇಬಿಹಾಳ
ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದರೇ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಹಿರೇಮುರಾಳ ಗ್ರಾಮದ ಬಳಿ ಶನಿವಾರ ರಾತ್ರಿ ಸಂಭವಿಸಿದೆ.
ಘಟನೆಯಲ್ಲಿ ಸಾವನ್ನಪ್ಪಿದ ವ್ಯಕ್ತಿ ನಾಲತವಾಡ ಪಟ್ಟಣದ ವೀರೇಶ ಪೇಟಕರ (29) ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ಮುತ್ತು ರುದ್ರಗಂಟಿ, ಬಸಯ್ಯ ತೆಗ್ಗಿನಮಠ ಪೈಕಿ ಚಾಲಕ ಬಸಯ್ಯನ ಸ್ಥಿತಿ ಗಂಭೀರವಾಗಿದೆ. ಮುದ್ದೇಬಿಹಾಳದಿಂದ ನಾಲತವಾಡಕ್ಕೆ ಇವರು ತೆರಳುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಗುದ್ದಿದೆ. ಮುದ್ದೇಬಿಹಾಳ ಪಿಎಸ್‌ಐ ಮಲ್ಲಪ್ಪ ಮಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.